ರಾಜಕೀಯ

ಸಿಎಂ ಯಡಿಯೂರಪ್ಪ ಮೇಲೆ ನಂಬಿಕೆಯಿದೆ, ಅವರು ನನ್ನ ಕೈಬಿಡುವುದಿಲ್ಲ: ಎಂ.ಟಿ.ಬಿ.ನಾಗರಾಜ್

ನನಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರವಿಲ್ಲ. ಸಿಎಂ ಯಡಿಯೂರಪ್ಪ ಮೇಲೆ ನನಗೆ ನಂಬಿಕೆ, ವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ನಮಗೆ ಅವಕಾಶ ಸಿಗುವ ಭರವಸೆ ಇದೆ ಎಂದು ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್ ಹೇಳಿದ್ದಾರೆ.

ಸಿಎಂ ಯಡಿಯೂರಪ್ಪ ಮೇಲೆ ನಂಬಿಕೆಯಿದೆ, ಅವರು ನನ್ನ ಕೈಬಿಡುವುದಿಲ್ಲ: ಎಂ.ಟಿ.ಬಿ.ನಾಗರಾಜ್
ಎಂ.ಟಿ.ಬಿ ನಾಗರಾಜ್
Published On :

ಬೆಂಗಳೂರು: ನನಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರವಿಲ್ಲ. ಸಿಎಂ ಯಡಿಯೂರಪ್ಪ ಮೇಲೆ ನನಗೆ ನಂಬಿಕೆ, ವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ನಮಗೆ ಅವಕಾಶ ಸಿಗುವ ಭರವಸೆ ಇದೆ ಎಂದು ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್ ಹೇಳಿದ್ದಾರೆ.


ಇಂದು ನೂತನ ಸಚಿವರ ಪ್ರಮಾಣ ವಚನ ಸಂದರ್ಭದಲ್ಲಿ ಮಾತನಾಡಿದ ಅವರು, ಸಿಎಂ ಅವರೇ ಖುದ್ದಾಗಿ ನನಗೆ ಆಹ್ವಾನ ನೀಡಿದ್ದು ಇಂದು ಭಾಗವಹಿಸುತ್ತಿದ್ದೇನೆ ಎಂದರು.


ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಎಂಟಿಬಿ ನಾಗರಾಜ್, ಹೊಸಕೋಟೆ ಸ್ಥಳೀಯ ಸಂಸ್ಥೆಯ ಚುನಾವಣೆ ವಿಚಾರವಾಗಿ ಚರ್ಚಿಸಲು ಸಿಎಂ ಪುತ್ರ ವಿಜಯೇಂದ್ರ ಅವರ ಜೊತೆ ಮಾತನಾಡಲು ಬಂದಿದ್ದೆ. ಶರತ್ ಬಚ್ಚೇಗೌಡ ಅವರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು. ಅವಕಾಶ ಬಂದಾಗ ನನ್ನನ್ನೂ ಸಚಿವನನ್ನಾಗಿ ಮಾಡುತ್ತಾರೆ. ಅಲ್ಲಿಯವರೆಗೆ ಕಾಯುತ್ತೇನೆ. ಮುಂದೆ ಏನಾಗುತ್ತದೆಯೋ ನೋಡೋಣ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.