ಬಿಎಸ್‌ವೈಗೆ ಸರ್ಕಾರ ರಚಿಸುವ, ಬೀಳಿಸುವ ಕಲೆ ಚೆನ್ನಾಗಿ ಗೊತ್ತಿದೆ: ಕುಮಾರಸ್ವಾಮಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸರ್ಕಾರ ಬೀಳಿಸುವ ಮತ್ತು ಸರ್ಕಾರ ರಚಿಸುವ ಕಲೆ ಚೆನ್ನಾಗಿ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸರ್ಕಾರ ಬೀಳಿಸುವ ಮತ್ತು ಸರ್ಕಾರ ರಚಿಸುವ ಕಲೆ ಚೆನ್ನಾಗಿ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಇಂದು ಎಚ್.ಡಿ.ಕೋಟೆಯ ಕಂಚಮಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಯಡಿಯೂರಪ್ಪ ಅವರು ಈ ಹಿಂದೆ ಏನೆಲ್ಲಾ ಮಾಡಿದ್ದರು, ಹೇಗೆ ಸರ್ಕಾರ ರಚಿಸಿದ್ದರು ಎಂಬುದನ್ನು ಜನ ನೋಡಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದಷ್ಟೇ ಹೇಳುತ್ತೇನೆ ಎಂದರು.
ಸಚಿವ ಸಂಪುಟ ವಿಸ್ತರಣೆ ವಿಷಯದಲ್ಲಿ ಯಡಿಯೂರಪ್ಪ ಅವರು ಬೆಳಗ್ಗೆ ಒಂದು ತೀರ್ಮಾನ, ಮಧ್ಯಾಹ್ನ ಮತ್ತೊಂದು ತೀರ್ಮಾನ ಕೈಗೊಳ್ಳುತ್ತಿದ್ದಾರೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಈ ಹಿಂದೆ ಅವರು 105 ಜನ ಬಿಜೆಪಿ ಶಾಸಕರು ಕಡುಬು ತಿಂದುಕೊಂಡು ಕೂತಿರುತ್ತಾರಾ? ಎಂದು ಯಡಿಯೂರಪ್ಪ ಕೇಳಿದ್ದರು. ಮುಂದೆ ಯಾರನ್ನು ಹೊಗಳುತ್ತಾರೆ ಕಾದು ನೋಡಿ, 10 ಜನ ಪ್ರಮಾಣ ವಚನ ಸ್ವೀಕಾರ ಮಾಡಿದರೂ ಹೊಗಳುತ್ತಾರೋ ಬಯ್ಯುತ್ತಾರೋ ನೋಡಿ ಎಂದರು.
ಈಗ 10 ಜನ ಸಚಿವರಾಗಿದ್ದಾರೆ. ಉಳಿದವರು ಸುಮ್ಮನೆ ಇರುತ್ತಾರಾ? ಎಂದು ಪ್ರಶ್ನಿಸಿದ ಅವರು, ಕೋಡಿ ಮಠದ ಸ್ವಾಮೀಜಿ ಈಗಾಗಲೇ ಭವಿಷ್ಯ ನುಡಿದಿದ್ದಾರೆ. ಈ ಗ ಸಮಸ್ಯೆ ಇಲ್ಲ, ಮುಂದೆ ಏನಾಗುತ್ತದೆಯೋ ಗೊತ್ತಿಲ್ಲ. ಭವಿಷ್ಯ ಹೇಳಲು ನಾನು ಜ್ಯೋತಿಷಿ ಅಲ್ಲ ಎಂದು ಕಂಚಮಳ್ಳಿಯಲ್ಲಿ ಕುಮಾರಸ್ವಾಮಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


