ಡಿಸಿಎಂ ಕಾರಜೋಳರ ಖಾತೆಯ ಮೇಲೆ ನೂತನ ಸಚಿವರ ಕಣ್ಣು
ಕಳೆದ ಡಿಸೆಂಬರ್‌ನಲ್ಲಿ ನಡೆದ ೧೫ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆದ ಬಳಿಕ ಡೋಲಾಯಮಾನವಾಗಿದ್ದ ಉಪಮುಖ್ಯಮಂತ್ರಿ ಸ್ಥಾನ ಈಗ ಭದ್ರವಾಗಿದ್ದು, ಸಚಿವ ಗೋವಿಂದ ಕಾರಜೋಳರ ಬಳಿಯ ಖಾತೆಗಳ ಮೇಲೆ ಇದೀಗ ಬಹುತೇಕ ಸಚಿವರ ಕಣ್ಣು ಬಿದ್ದಿದೆ.

ಬಾಗಲಕೋಟೆ: ಕಳೆದ ಡಿಸೆಂಬರ್‌ನಲ್ಲಿ ನಡೆದ ೧೫ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆದ ಬಳಿಕ ಡೋಲಾಯಮಾನವಾಗಿದ್ದ ಉಪಮುಖ್ಯಮಂತ್ರಿ ಸ್ಥಾನ ಈಗ ಭದ್ರವಾಗಿದ್ದು, ಸಚಿವ ಗೋವಿಂದ ಕಾರಜೋಳರ ಬಳಿಯ ಖಾತೆಗಳ ಮೇಲೆ ಇದೀಗ ಬಹುತೇಕ ಸಚಿವರ ಕಣ್ಣು ಬಿದ್ದಿದೆ.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳರ ಬಳಿ ಪ್ರಭಾವಿ ಖಾತೆಗಳಾಗಿರುವ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಖಾತೆಗಳಿದ್ದು, ಈ ಖಾತೆಗಳಿಗಾಗಿ ಇತರರು ಪೈಪೋಟಿಗೆ ಇಳಿದಿದ್ದಾರೆ. ಪೈಪೋಟಿಯ ಮಧ್ಯೆಯೂ ಕಾರಜೋಳರು ಎರಡೂ ಖಾತೆಗಳನ್ನು ಉಳಿಸಿಕೊಳ್ಳುತ್ತಾರೋ ಇಲ್ಲವೆ ಇರುವ ಎರಡರಲ್ಲಿ ಯಾವುದನ್ನು ಉಳಿಸಿಕೊಳ್ಳಲಿದ್ದಾರೆ ಎನ್ನುವುದು ಕುತೂಹಲದ ಸಂಗತಿ ಆಗಿದೆ. ಏತನ್ಮಧ್ಯೆ ಅಖಂಡ ವಿಜಯಪುರ ಜಿಲ್ಲೆಗೆ ಸದ್ಯ ಸಂಪುಟದಲ್ಲಿ ಒಂದೇ ಸ್ಥಾನ ಲಭ್ಯವಾಗಿದೆ. ಗೋವಿಂದ ಕಾರಜೋಳರೊಬ್ಬರೇ ಸಚಿವರಾಗಿದ್ದಾರೆ.
ಸದ್ಯ ಅವರು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರೂ ಹೌದು. ವಿಜಯಪುರ-ಬಾಗಲಕೋಟೆ ಅಖಂಡ ಜಿಲ್ಲೆಯ ಬಿಜೆಪಿ ಪಾಳೆಯದಲ್ಲಿ ಪ್ರಭುತ್ವ ಸಾಧಿಸಿರುವ ಕಾರಜೋಳರು ಎರಡರಲ್ಲಿ ಯಾವ ಜಿಲ್ಲೆಯ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎನ್ನುವುದು ಅಖಂಡ ಜಿಲ್ಲೆಯ ಬಿಜೆಪಿ ಪಾಳೆಯದಲ್ಲಿ ಸಾಕಷ್ಟು ಕಾತರವನ್ನುಂಟು ಮಾಡಿದೆ. ಮೂಲತಃ ವಿಜಯಪುರ ಜಿಲ್ಲೆಗೆ ಸೇರಿರುವ ಡಿಸಿಎಂ ಕಾರಜೋಳರ ಅವರು ಬಾಗಲಕೋಟೆ ಜಿಲ್ಲೆಯ ಮುಧೋಳ ಮೀಸಲು ವಿಧಾನಸಭೆ ಕ್ಷೇತ್ರವನ್ನು ಐದನೇ ಬಾರಿಗೆ ಪ್ರತಿನಿಧಿಸುತ್ತಿದ್ದಾರೆ. ಹಾಗಾಗಿ ವಿಜಯಪುರ ಜಿಲ್ಲೆಯ ಉಸ್ತುವಾರಿಯೂ ಇವರ ಹೆಗಲಿಗೆ ಬೀಳುವ ಸಾಧ್ಯತೆಗಳು ನಿಚ್ಚಳವಾಗುತ್ತಿವೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆ ಪ್ರಕಾರ ಮಾರ್ಚ್ ೫ ರ ಒಳಗಾಗಿ ಇನ್ನೊಮ್ಮೆ ಸಂಪುಟ ವಿಸ್ತರಣೆ ಆಗಿ ವಿಜಯಪುರ ಜಿಲ್ಲೆಯವರು ಯಾರಾದರೂ ಸಂಪುಟ ಸೇರ್ಪಡೆಗೊಂಡಲ್ಲಿ ಉಸ್ತುವಾರಿ ಬದಲಾಗಬಹುದು. ಅಲ್ಲಿಯವರೆಗೆ ಬಾಗಲಕೋಟೆ ಜಿಲ್ಲೆಯ ಜತೆಗೆ ಕಾರಜೋಳರಿಗೆ ವಿಜಯಪುರ ಜಿಲ್ಲೆಯ ಉಸ್ತುವಾರಿಯ ಜವಾಬ್ದಾರಿ ಬೀಳಲಿದೆ ಎಂದು ಹೇಳಲಾಗುತ್ತಿದೆ. ಸದ್ಯದ ವಿದ್ಯಮಾನಗಳನ್ನು ಗಮನಿಸಿದಾಗ ಬೆಳಗಾವಿ ಜಿಲ್ಲೆಗೆ ಸೇರಿದ ಸಚಿವರೊಬ್ಬರು ಬಾಗಲಕೋಟೆ ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡಲ್ಲಿ ಅಚ್ಚರಿ ಪಡಬೇಕಿಲ್ಲ.
-ವಿಠ್ಠಲ ಆರ್. ಬಲಕುಂದಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


