ಬೆಳಗಾವಿ ಸಾಹುಕಾರ್ ಯಶಸ್ಸಿಗೆ ಡಿಕೆಶಿ ಕಾರಣವಂತೆ? ಕೊನೆಗೂ ಸತ್ಯ ಬಾಯ್ಬಿಟ್ಟ ಸಚಿವ ರಮೇಶ್ ಜಾರಕಿಹೊಳಿ
ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸಿ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಮುಖ ಪಾತ್ರ ವಹಿಸಿದ ಸಚಿವ ರಮೇಶ್ ಜಾರಕಿಹೊಳಿ ಯಶಸ್ಸಿಗೆ ಡಿಕೆ ಶಿವಕುಮಾರ್ ಕಾರಣವಂತೆ. ಯಾವ ರೀತಿ ಕಾರಣವಾಗಿದ್ದಾರೆ ಎಂಬ ಸತ್ಯವನ್ನು ಕೊನೆಗೂ ಬಾಯ್ಬಿಟ್ಟಿದ್ದಾರೆ

ಬೆಳಗಾವಿ: ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಮೇಶ್ ಜಾರಕಿಹೊಳಿ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಭಾನುವಾರ ತಮ್ಮ ಸ್ವಕ್ಷೇತ್ರಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಕುರಿತು ವ್ಯಂಗ್ಯವಾಗಿ ಮಾತನಾಡಿದ ರಮೇಶ್ ಜಾರಕಿಹೊಳಿ, ನನ್ನ ಯಶಸ್ಸಿಗೆ ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದಗಳು. ಬೆಳಗಾವಿ ರಾಜಕೀಯ ವ್ಯವಹಾರದಲ್ಲಿ ಡಿಕೆ ಶಿವಕುಮಾರ್ ತಲೆ ಹಾಕಿದ್ದರಿಂದ ನಾನು ರಾಜಕೀಯವಾಗಿ ಬೆಳೆಯಲು ಸಾಧ್ಯವಾಯಿತು. ಈ ಹಂತಕ್ಕೆ ಬಂದು ನಿಲ್ಲಲು ಸಾಧ್ಯವಾಯಿತು ಎಂದು ಹೇಳುವ ಮೂಲಕ ತಮ್ಮ ಯಶಸ್ಸಿನ ಗುಟ್ಟನ್ನು ಬಿಟ್ಟುಕೊಟ್ಟರು.
ಮಹೇಶ್ ಕುಮಟಳ್ಳಿ ಮತ್ತಿತರರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸದೆ ಇರುವುದು ತಮ್ಮಗೆ ನೋವುಂಟು ಮಾಡಿದೆ. ಕುಮಟ್ಟಳ್ಳಿ ಒತ್ತಡದ ಹೇರಿದ ನಂತರವೇ ನಾನು ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿದೆ. ಬಾಲಚಂದ್ರ ಜಾರಕಿಹೊಳಿ ಮತ್ತು ಕುಮಟ್ಟಳ್ಳಿ ಅವರ ಪ್ರಯತ್ನದಿಂದಲೇ ನಾನು ಸಚಿವನಾಗಿರುವುದಾಗಿ ರಮೇಶ್ ಜಾರಕಿಹೊಳಿ ತಿಳಿಸಿದರು.
ಸತೀಶ್ ಜಾರಕಿಹೊಳಿ 20 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸ ಮಾಡಿರಲಿಲ್ಲ. ಕೇವಲ 2 ವರ್ಷಗಳಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ರಾಜಕೀಯದಲ್ಲಿ, ಯಾವ ಸಮಯದಲ್ಲಿ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ನಿರ್ಧರಿಸುವುದು ಬಹಳ ಮುಖ್ಯ. ನಿಮ್ಮನ್ನು ನಂಬಿದ ಜನರನ್ನು ಎಂದಿಗೂ ಕೈಬಿಡಬೇಡಿ. ನನ್ನ ಸ್ವಂತ ಜನರು ನನ್ನನ್ನು ಬೆನ್ನಿಗೆ ಇರಿದರು ಮತ್ತು ಭವಿಷ್ಯದಲ್ಲಿ ಅವರನ್ನು ನಂಬುವ ತಪ್ಪನ್ನು ನಾನು ಪುನರಾವರ್ತಿಸುವುದಿಲ್ಲ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


