ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿದ್ದ ಮಹೇಶ್ ಕುಮಟಳ್ಳಿಗೆ ಎಂಎಸ್ಐಎಲ್ ಅಧ್ಯಕ್ಷ ಸ್ಥಾನ!
ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿದ್ದ ಮಹೇಶ್ ಕುಮಟಳ್ಳಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಮಹತ್ವದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್(ಎಂಎಸ್ಐಎಲ್) ಅಧ್ಯಕ್ಷ ಸ್ಥಾನ ನೀಡಿದ್ದಾರೆ.

ಬೆಂಗಳೂರು: ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿದ್ದ ಮಹೇಶ್ ಕುಮಟಳ್ಳಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಮಹತ್ವದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್(ಎಂಎಸ್ಐಎಲ್) ಅಧ್ಯಕ್ಷ ಸ್ಥಾನ ನೀಡಿದ್ದಾರೆ.
ಸಚಿವ ಸಂಪುಟ ವಿಸ್ತಾರಣೆಯಲ್ಲಿ ಉಪ ಚುನಾವಣೆಯಲ್ಲಿ ಗೆದ್ದಿರುವ ಅರ್ಹರಲ್ಲಿ ಕುಮಟಳ್ಳಿ ಅವರಿಗೆ ಮಾತ್ರ ಸಚಿವ ಸ್ಥಾನ ನೀಡಿರಲಿಲ್ಲ. ಬೆಳಗಾವಿ ಜಿಲ್ಲೆಯ ಪ್ರಾತಿನಿಧ್ಯ ಹೆಚ್ಚಾಗುವ ಕಾರಣ ಕುಮಟಳ್ಳಿ ಅರವನ್ನು ಸಚಿವ ಸ್ಥಾನಕ್ಕೆ ಪರಿಗಣಿಸಿರಲಿಲ್ಲ.
ಇಂದು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಮಹೇಶ್ ಕುಮಟಳ್ಳಿ ಅವರಿಗೆ ನಿಗಮ ಮಂಡಳಿಯಲ್ಲಿ ಪ್ರಮುಖ ಹುದ್ದೆಯನ್ನು ಬಿಎಸ್ ಯಡಿಯೂರಪ್ಪ ಅವರು ನೀಡಿ ಈ ಮೂಲಕ ಕುಮಟಳ್ಳಿ ಅವರ ಅಸಮಾಧಾನ ಶಮನ ಮಾಡುವ ಪ್ರಯತ್ನವನ್ನು ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


