ಬಿಜೆಪಿ ವಿರುದ್ಧ ಹೋರಾಡಲು ಕಾಂಗ್ರೆಸ್ ಗೆ ಪ್ರಾದೇಶಿಕ ಪಕ್ಷಗಳ ಬೆಂಬಲ: ದೇವೇಗೌಡ
ಜನ ವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿರುವ ಬಿಜೆಪಿ ವಿರುದ್ಧ ಹೋರಾಟ ನಡೆಸಲು ಎಲ್ಲಾ ಪ್ರಾದೇಶಿಕ ಪಕ್ಷಗಳು ಮುಂದೆ ಬಂದು ಕಾಂಗ್ರೆಸ್ ಗೆ ಬೆಂಬಲ ನೀಡಲಪು ಯೋಜಿಸುತ್ತಿವೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.

ಬೆಂಗಳೂರು: ಜನ ವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿರುವ ಬಿಜೆಪಿ ವಿರುದ್ಧ ಹೋರಾಟ ನಡೆಸಲು ಎಲ್ಲಾ ಪ್ರಾದೇಶಿಕ ಪಕ್ಷಗಳು ಮುಂದೆ ಬಂದು ಕಾಂಗ್ರೆಸ್ ಗೆ ಬೆಂಬಲ ನೀಡಲಪು ಯೋಜಿಸುತ್ತಿವೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಹಲವು ಪ್ರಾದೇಶಿಕ ಪಕ್ಷಗಳು ಒಗ್ಗಟ್ಟಾಗಿ ಕಾಂಗ್ರೆಸ್ ಮುಂದಾಳತ್ವದಲ್ಲಿ ಹೋರಾಟ ನಡೆಸಲು ಚಿಂತಿಸುತ್ತಿವೆ ಎಂದು ದೇವೇಗೌಡರು ತಿಳಿಸಿದ್ದಾರೆ. ಪ್ರಾದೇಶಿಕಪಕ್ಷಗಳು ಬಿಜೆಪಿ ವಿರುದ್ಧ ಹೋರಾಡಲು ನಿರ್ಧರಿಸಿವೆ, ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಬೆಂಬಲ ನೀಡಲು ಮುಂದಾಗುತ್ತಿವೆ ಎಂದು ವಿವರಿಸಿದ್ದಾರೆ.
ಪ್ರಾದೇಶಿಕ ಪಕ್ಷಗಳು ಬಿಜೆಪಿ ವಿರುದ್ಧ ಹೋರಾಟ ನಡೆಸಲು ಸಿದ್ಧವಿದೆ ಎಂಬುದನ್ನು ಜನರಿಗೆ ತೋರಿಸಲು ಕಾಂಗ್ರೆಸ್ ಸಹಾಯ ಮಾಡಲಿದೆ ಎಂದು ಹೇಳಿದ್ದಾರೆ.
2018 ರಲ್ಲಿ ಬಿಜೆಪಿ ಹೆಚ್ಚಿನ ಸಂಖ್ಯೆಯ ಸೀಟು ಪಡೆದರೂ, ಆದರೆ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಬೇಕೆಂಬ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚಿಸಿತು ಎಂದು ತಿಳಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


