ಪರಿಷತ್ ಚುನಾವಣೆ: ಸಿದ್ದರಾಮಯ್ಯ - ದಿನೇಶ್ ಗುಂಡೂರಾವ್ ರಹಸ್ಯ ಸಭೆ
ವಿಧಾನ ಪರಿಷತ್ತಿನ ಪಕ್ಷೇತರ ಅಭ್ಯರ್ಥಿ ಅನಿಲ್ ಕುಮಾರ್ ಅವರಿಗೆ ಪಕ್ಷದಿಂದ ಬೆಂಬಲ ನೀಡುವ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಜತೆ ರಹಸ್ಯ ಸಭೆ ನಡೆಸಿರುವ ಬಗ್ಗೆ ವರದಿಯಾಗಿದೆ.

ಬೆಂಗಳೂರು: ವಿಧಾನ ಪರಿಷತ್ತಿನ ಪಕ್ಷೇತರ ಅಭ್ಯರ್ಥಿ ಅನಿಲ್ ಕುಮಾರ್ ಅವರಿಗೆ ಪಕ್ಷದಿಂದ ಬೆಂಬಲ ನೀಡುವ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಜತೆ ರಹಸ್ಯ ಸಭೆ ನಡೆಸಿರುವ ಬಗ್ಗೆ ವರದಿಯಾಗಿದೆ.
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಪ್ರಮುಖ ನಾಯಕರ ಜತೆ ಸಭೆ ಬಳಿಕ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಪರಸ್ಪರ ಚರ್ಚೆ ನಡೆಸಿದ್ದಾರೆ.
ಪಕ್ಷೇತರ ಅಭ್ಯರ್ಥಿಗೆ ಬೆಂಬಲ ಕೊಡುವ ಬಗ್ಗೆ ತಮ್ಮನ್ನು ಸಂಪರ್ಕಿಸದೆ ತಮ್ಮ ಗಮನಕ್ಕೂ ತಾರದೆ ಕೇವಲ ಜೆಡಿಎಸ್ ನಾಯಕರು ಹಾಗೂ ಪಕ್ಷದ ಡಿ.ಕೆ.ಶಿವಕುಮಾರ್ ಜತೆ ಮಾತ್ರವೇ ಚರ್ಚೆ ಮಾಡಿದ್ದಾರೆಂದು ಪರಸ್ಪರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಜೊತೆ ಚರ್ಚಿಸದೇ ನಿರ್ಧಾರ ತೆಗೆದುಕೊಂಡಿರುವುದರಿಂದ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸುವುದು ಸರಿಯಲ್ಲ. ಒಂದು ವೇಳೆ ಬೆಂಬಲಿಸಿದರೆ ಮುಖಭಂಗ ಅನುಭವಿಸಬೇಕಾಗಿ ಬಂದು, ಅದು ಪಕ್ಷದ ಮೇಲೆ ಪರಿಣಾಮ ಬೀರಬಹುದೆಂದು ಎಂಬ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
ತಮಗೆ ಗೊತ್ತಿಲ್ಲದಂತೆಯೇ ಶಿವಕುಮಾರ್ ಹಾಗೂ ಎಚ್.ಡಿ.ಕುಮಾರಸ್ವಾಮಿ ಆಟ ಆಡಿದ್ದಾರೆಂದು ಕುಪಿತಗೊಂಡಿರುವ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್, ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡದಿದ್ದರೆ ಬಿಜೆಪಿಯ ಲಕ್ಷ್ಮಣ್ ಸವದಿಗೆ ಗೆಲುವು ಸುಲಭವಾಗಬಹುದು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


