'ಆಗಸಕ್ಕೆ ಉಗಿದು ತಮ್ಮ ಮುಖಕ್ಕೆ ತಾವೇ ಸಿಡಿಸಿಕೊಂಡಿದ್ದಾರೆ ಯತ್ನಾಳ್'
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರನ್ನು ನಿಂದಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ನಾಯಕ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಹರಿಹಾಯ್ದಿದ್ದಾರೆ.

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರನ್ನು ನಿಂದಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ನಾಯಕ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಹರಿಹಾಯ್ದಿದ್ದಾರೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಗಾಂಧೀಜಿಯ ಒಡನಾಡಿಯಾಗಿದ್ದ ಎಚ್.ಎಸ್. ದೊರೆಸ್ವಾಮಿಯವರಿಗೆ ಅವಹೇಳನಕಾರಿ ಟೀಕೆ ಮಾಡಿರುವ ಬಿಜೆಪಿ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಖಂಡನೀಯವಾಗಿದೆ.
ನಾಡಿನ ಸಾಕ್ಷಿಪ್ರಜ್ಞೆಯಾಗಿರುವ ದೊರೆಸ್ವಾಮಿಯವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸಿರುವ ಯತ್ನಾಳ್ ಆಗಸಕ್ಕೆ ಉಗಿದು ತಮ್ಮ ಮುಖಕ್ಕೆ ಸಿಡಿಸಿಕೊಂಡಿರುವುದು ಎಂತಹ ಚೋದ್ಯ ಎಂದಿದ್ದಾರೆ.
ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಸಾಕಷ್ಟು ಜನ ಹೋರಾಟ ಮಾಡಿದ್ದಾರೆ. ದೊರೆಸ್ವಾಮಿ ಒಬ್ಬರೇ ಮಾಡಿಲ್ಲ. ಪಾಕಿಸ್ತಾನ್ ಪರ ಘೋಷಣೆ ಕೂಗುವವರನ್ನು ಸಮರ್ಥಿಸಿಕೊಳ್ಳುವುದನ್ನು ನೋಡಿದರೆ ಅವರು ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಯತ್ನಾಳ್ ಹೇಳಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


