ವಿದೇಶಕ್ಕೆ ಹೋಗುವ ಮುನ್ನ ಸಂಪುಟ ವಿಸ್ತರಣೆ ಮಾಡುವ ಅಪೇಕ್ಷೆ ಇದೆ: ಸಿಎಂ ಯಡಿಯೂರಪ್ಪ
8-10 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದು, ನಾನು ವಿದೇಶಕ್ಕೆ ಹೋಗುವ ಮುನ್ನ ಸಂಪುಟ ವಿಸ್ತರಣೆ ಮಾಡುವ ಅಪೇಕ್ಷೆ ಇದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಬೆಂಗಳೂರು 8-10 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದು, ನಾನು ವಿದೇಶಕ್ಕೆ ಹೋಗುವ ಮುನ್ನ ಸಂಪುಟ ವಿಸ್ತರಣೆ ಮಾಡುವ ಅಪೇಕ್ಷೆ ಇದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಜ.16-18 ಕ್ಕೆ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೆಂಗಳೂರಿಗೆ ಆಗಮಿಸಲಿ ದ್ದಾರೆ.ಅದಕ್ಕೂ ಮುನ್ನ ನಾನು ದೆಹಲಿಗೆ ಹೋಗಿ ಸಂಪುಟ ವಿಸ್ತರಣೆಗೆ ವರಿಷ್ಟರ ಜೊತೆ ಚೆರ್ಚೆ ನಡೆಸಿ ಬರುತ್ತೇನೆಂದು ಅವರು ತಿಳಿಸಿದರು.
ಸ್ವಿಡ್ಜಲ್ ಲ್ಯಾಂಡ್ ನ ದಾವೋಸ್ ಗೆ ನ ಆರ್ಥಿಕ ಶೃಂಗ ಸಭೆಗೆ ತೆರಳುವ ಆಸೆ ತಮಗೆ ಇರಲಿಲ್ಲ.ಆದರೆ ಹೋಗಲೇ ಬೇಕಾದ ಅನಿವಾರ್ಯತೆಯಿಂದ ದಾವೋಸ್ ಗೆ ತೆರಳುತ್ತಿದ್ದೇನೆ.ವಿದೇಶಕ್ಕೆ ಹೋಗುವ ಮುನ್ನ ಸಂಪುಟ ವಿಸ್ತರಣೆ ಮಾಡುವ ಪ್ರಯತ್ನ ಮಾಡುತ್ತೇನೆ ಎಂದು ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಮೂರು ನಾಲ್ಕು ದಿನಗಳಲ್ಲಿ ದೆಹಲಿಗೆ ಹೋಗಲಿದ್ದು,ಮಹದಾಯಿ ನ್ಯಾಯಾಧಿಕರಣ ಅಧಿಸೂಚನೆ ಪ್ರಕಟ ಸಂಬಂಧ ಜಲಶಕ್ತಿ ಸಚಿವರ ಜೊತೆ ಚರ್ಚೆ ಮಾಡುತ್ತೇನೆ.ಸಂಬಂಧ ಪಟ್ಟ ಸಚಿವರನ್ನು ಭೇಟಿಯಾಗಿ ಅಗತ್ಯ ಕ್ರಮ ತೆಗೆದುಕೊಳ್ಳಲು ಮನವಿ ಮಾಡುತ್ತೇನೆ. ಗೋವಾ, ಮಹಾರಾಷ್ಟ್ರ ಸರ್ಕಾರದ ಜೊತೆಯೂ ಮಾತನಾಡಿ ಎಂದು ಸಂಬಂಧಪಟ್ಟ ಸಚಿವರನ್ನು ಮನವಿ ಮಾಡುತ್ತೇವೆ ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


