ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣು: ದೆಹಲಿಗೆ ತೆರಳಿದ ಡಿಕೆಶಿ
ಮುಂದಿನ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟು ಒಂದು ತಿಂಗಳಿನಿಂದ ಪ್ರಯತ್ನ ನಡೆಸುತ್ತಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ನಿನ್ನೆ ಸಂಜೆ ದೆಹಲಿಗೆ ಪ್ರಯಾಣ ಬೆಳೆಸಿದರು.

ಬೆಂಗಳೂರು: ಮುಂದಿನ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟು ಒಂದು ತಿಂಗಳಿನಿಂದ ಪ್ರಯತ್ನ ನಡೆಸುತ್ತಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ನಿನ್ನೆ ಸಂಜೆ ದೆಹಲಿಗೆ ಪ್ರಯಾಣ ಬೆಳೆಸಿದರು.
ವರಿಷ್ಠರೊಂದಿಗೆ ಮಾತುಕತೆ ನಡೆಸುವ ಸಲುವಾಗಿ ದೆಹಲಿಗೆ ಭೇಟಿ ನೀಡಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಲ್ಲಿ ಡಿಕೆಶಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ. ಆದರೆ, ಅದು ಅಂದುಕೊಂಡಷ್ಟು ಸುಲಭವಾಗಿಲ್ಲ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಹಿಮ್ಮೆಟ್ಟಿಸುವುದು ಡಿಕೆಶಿಯ ಮೊದಲ ಸವಾಲು ಆಗಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಸಿದ್ದರಾಮಯ್ಯ ಅವರ ನಿವಾಸಕ್ಕೂ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ
ಮೊದಲಿನಿಂದಲೂ ಡಿಕೆಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಅಷ್ಟೇನೂ ಸಂಬಂಧ ಸರಿಯಾಗಿಲ್ಲ. 2013ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಸುಮಾರು ಆರು ತಿಂಗಳ ಕಾಲ ಡಿಕೆಶಿಗೆ ಯಾವುದೇ ಸಚಿವ ಸ್ಥಾನ ನೀಡಿರಲಿಲ್ಲ. ಇತ್ತೀಚಿಗೆ ಡಿಕೆಶಿ ಇಡಿ ಬಂಧನ ವಿರೋಧಿಸಿ ನಡೆದ ಪ್ರತಿಭಟನೆ ವೇಳೆಯಲ್ಲೂ ಸಿದ್ದರಾಮಯ್ಯ ಕಾಣಿಸಿಕೊಂಡಿರಲಿಲ್ಲ
ಡಿಕೆ ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ಅವರ ಬೆಂಬಲ ಅಗತ್ಯವಾಗಿದೆ. ಏಕೆಂದರೆ ಸಿದ್ದರಾಮಯ್ಯ ಅವರ ಬೆಂಬಲಿಗ , ಲಿಂಗಾಯಿತ ಸಮುದಾಯದ ಪ್ರಭಾವಿ ಮುಖಂಡ ಎಂಬಿ ಪಾಟೀಲ್ ಕೂಡಾ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣು ಹಾಕಿದ್ದಾರೆ. ಯಾರೇ ಆ ಸ್ಥಾನ ಪಡೆಯಬೇಕಾದರೂ ಸಿದ್ದರಾಮಯ್ಯ ಅವರ ಆಶೀರ್ವಾದ ಬೇಕೇ ಬೇಕು. ರಾಮಲಿಂಗಾರೆಡ್ಡಿ ಹೆಸರು ಕೂಡಾ ಈ ಸ್ಥಾನಕ್ಕಾಗಿ ಕೇಳಿಬರುತ್ತಿದೆ.
ಸಿದ್ದರಾಮಯ್ಯ ಅವರ ಮತ್ತೊಬ್ಬ ಬೆಂಬಲಿಗ ಸತೀಶ್ ಜಾರಕಿಹೊಳಿ ಕೂಡಾ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇತ್ತೀಚಿಗೆ ರಾಜ್ಯ ಕಾಂಗ್ರೆಸ್ ನಾಯಕರು ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ.
ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ನಾಯಕ ಸ್ಥಾನವನ್ನು ಬೇರೆಯವರಿಗೆ ಬಿಟ್ಟುಕೊಟ್ಟು, ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಮುಂದುವರೆಯಲಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


