'10-15 ಬಿಜೆಪಿ ಶಾಸಕರು ಪಕ್ಷ ಬಿಟ್ಟು ಹೊರಬರಲು ತುದಿಗಾಲಿನಲ್ಲಿ ನಿಂತಿದ್ದಾರೆ'
ಹತ್ತರಿಂದ ಹದಿನೈದು ಬಿಜೆಪಿ ಶಾಸಕರು ಪಕ್ಷ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಹಾಸನ: ಹತ್ತರಿಂದ ಹದಿನೈದು ಬಿಜೆಪಿ ಶಾಸಕರು ಪಕ್ಷ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು ಆಪರೇಷನ್ ಕಮಲ ಸೂತ್ರಧಾರಿ ಬಿಜೆಪಿಗೆ ಆಪರೇಷನ್ ಭೀತಿ ಕಾಡುವಂತ ಹೇಳಿಕೆ ನೀಡಿದ್ದಾರೆ. '10-15 ಬಿಜೆಪಿ ಶಾಸಕರು ಪಕ್ಷ ಬಿಟ್ಟು ಹೊರಬರಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದಿದ್ದಾರೆ. ಕೆಲವು ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದ ಕುಮಾರಸ್ವಾಮಿ, 'ನಾನು ಕೊಳಕಿಗೆ ಕೈ ಹಾಕುವ ಕೆಲಸ ಮಾಡುವುದಿಲ್ಲ, ಸರ್ಕಾರವನ್ನು ಉರುಳಿಸುವ ಯತ್ನ ಮಾಡುವುದಿಲ್ಲ' ಎಂದು ಸ್ಪಷ್ಟಪಡಿಸಿದರು.
ಸಂಪುಟ ವಿಸ್ತರಣೆ ಅಸಮಾಧಾನ ಹಾಗೂ ಮಾಜಿ ಅನರ್ಹ ಶಾಸಕರಿಗೆ ಮಣೆ ಹಾಕುವ ವಿಚಾರ ಮೂಲ ಬಿಜೆಪಿ ಶಾಸಕರಲ್ಲಿ ಅತೃಪ್ತಿ ಮೂಡಿಸಿರುವ ಹೊತ್ತಿನಲ್ಲಿಯೇ ಕುಮಾರಸ್ವಾಮಿ ನೀಡಿರುವ ಈ ಹೇಳಿಕೆ ಕುತೂಹಲ ಕೆರಳಿಸಿದೆ. ಉಮೇಶ್ ಕತ್ತಿ, ರೇಣುಕಾಚಾರ್ಯ, ಅರವಿಂದ ಲಿಂಬಾವಳಿ ಸೇರಿದಂತೆ ಇನ್ನೂ ಹಲವು ಶಾಸಕರುಗಳು ಸಂಪುಟ ವಿಸ್ತರಣೆ ವೇಳೆ ಕಡೆಗಣೆನೆಗೆ ತುತ್ತಾಗಿ ಪಕ್ಷದ ವಿರುದ್ಧ ಸಿಟ್ಟಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


