ಕೇಂದ್ರದ 669 ಕೋಟಿ ನೆರೆ ಪರಿಹಾರ ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ: ಸಿದ್ದರಾಮಯ್ಯ ಟೀಕೆ
‘ಕೇಂದ್ರ ಸರಕಾರ ನೀಡಿರುವ 669.85 ಕೋಟಿ ರೂ.ಹೆಚ್ಚುವರಿ ನೆರೆ ಪರಿಹಾರ ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬೆಂಗಳೂರು: ‘ಕೇಂದ್ರ ಸರಕಾರ ನೀಡಿರುವ 669.85 ಕೋಟಿ ರೂ.ಹೆಚ್ಚುವರಿ ನೆರೆ ಪರಿಹಾರ ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಗೋಗರೆತಕ್ಕೆ ಕರಗಿದ ಪ್ರಧಾನಿ ಮೋದಿ 669.85 ಕೋಟಿ ರೂ. ಹೆಚ್ಚುವರಿ ನೆರೆ ಪರಿಹಾರ ದಯಪಾಲಿಸಿದ್ದು, ಒಟ್ಟು ಪರಿಹಾರ 1869.85 ರೂ.ಆಗುತ್ತೆ ಎಂದು ಟೀಕಿಸಿದ್ದಾರೆ.
ಯಡಿಯೂರಪ್ಪ ಅವರೇ, ನೆನಪಿರಲಿ ನೀವೇ ಒಪ್ಪಿಕೊಂಡಂತೆ ಅಂದಾಜು ನಷ್ಟ 50 ಸಾವಿರ ಕೋಟಿ ರೂ., ನೀವು ಕೇಳಿದ್ದು 38ಸಾವಿರ ಕೋಟಿ ರೂ. ನಿಮ್ಮ ಗೋಗರೆತಕ್ಕೆ ಸಿಕ್ಕಿದ್ದು ಕೇವಲ 1,869ಕೋಟಿ ರೂ. ಇಷ್ಟು ಸಾಕಾ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
‘ಮುಖ್ಯಮಂತ್ರಿ ಯಡಿಯೂರಪ್ಪನವರೇ, ನೀವು 38 ಸಾವಿರ ಕೋಟಿ ರೂ. ಪರಿಹಾರ ಕೇಳಿದ್ದು ಆಗಸ್ಟ್ ತಿಂಗಳ ನೆರೆ ಹಾವಳಿಗೆ. ಅಕ್ಟೋಬರ್ ತಿಂಗಳ ಅತಿವೃಷ್ಟಿಯ ನಷ್ಟದ ಸಮೀಕ್ಷೆಯೇ ಪೂರ್ಣಗೊಂಡಿಲ್ಲ. ತಕ್ಷಣ ಅದನ್ನು ಮುಗಿಸಿ ಕೇಂದ್ರಕ್ಕೆ ಹೆಚ್ಚುವರಿ ಪರಿಹಾರದ ಬೇಡಿಕೆ ಸಲ್ಲಿಸಿ’ ಎಂದು ಸಿದ್ದರಾಮಯ್ಯ ಮತ್ತೊಂದು ಟ್ವೀಟ್‌ನಲ್ಲಿ ಸಲಹೆ ನೀಡಿದ್ದಾರೆ.
ಸುಳ್ಳು ದೇವರ ಭಕ್ತರಾದ ಬಿಜೆಪಿ ನಾಯಕರು ಪರಿಹಾರದ ಮೊತ್ತ 1200+1869.85=ರೂ.3069 ಕೋಟಿ ಎಂದು ಹೇಳಿ ಸಂಭ್ರಮಿಸುತ್ತಿರುವುದು ತಮಾಷೆಯಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
‘ತಮ್ಮ ಪಕ್ಷದ ರಾಜಕೀಯ ಸಿದ್ಧಾಂತ ಒಪ್ಪದಿರುವವರು ಅಧ್ಯಕ್ಷರಾಗಿರುವ ಕಾರಣಕ್ಕೆ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ನಿರಾಕರಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ನಿರ್ಧಾರ ಕನ್ನಡ ನಾಡು-ನುಡಿಗೆ ಬಗೆದ ದ್ರೋಹವಾಗಿದೆ. ಕನ್ನಡ ಸಾಹಿತ್ಯ ಪರಿಷತ್‌ನ ಸ್ವಾಯತ್ತತೆ ಗೌರವಿಸುವುದು ಸರಕಾರದ ಕರ್ತವ್ಯ ಎಂದು ಮತ್ತೊಂದು ಟ್ವೀಟ್‌ನಲ್ಲಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


