ಮೈಸೂರು ಪಾಲಿಕೆ ಮೇಯರ್ ಚುನಾವಣೆ: ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಮುಂದುವರಿಕೆ
ಮೈಸೂರು ಮಹಾನಗರಪಾಲಿಕೆಯ ಮೇಯರ್- ಉಪಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಬುಧವಾರ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸಭೆ ನಡೆಸಿವೆ.

ಮೈಸೂರು: ಮೈಸೂರು ಮಹಾನಗರಪಾಲಿಕೆಯ ಮೇಯರ್- ಉಪಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಬುಧವಾರ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸಭೆ ನಡೆಸಿವೆ.
ಅಧಿಕಾರ ಹಂಚಿಕೆ ಒಪ್ಪಂದದಂತೆ ಇದುವರೆಗೆ ಕಾಂಗ್ರೆಸ್ ನ ಪುಷ್ಪಲತಾ ಜಗನ್ನಾಥ್ ಮೇಯರ್ ಆಗಿದ್ದರು, ಅವರ ಒಂದು ವರ್ಷದ ಅವದಿ ಪೂರೈಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಸದಸ್ಯರೊಬ್ಬರು ಮೇಯರ್ ಪಟ್ಟ ಅಲಂಕರಿಸಲಿದ್ದಾರೆ,.
ಮಾಜಿ ಸಿಎಂ ಸಿದ್ದರಾಮಯ್ಯ ನಿರ್ದೇಶನದಂತೆ ಕಾಂಗ್ರೆಸ್ ನ ಹಲವು ಸದಸ್ಯರು ಜೆಡಿಎಸ್ ಮುಖಂಜ ಸಾ.ರಾ ಮಹೇಶ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ,. ಮೇಯರ್ ಅಭ್ಯರ್ಥಿ ಆಯ್ಕೆ ಮಾಡಿದ ನಂತರ ತಮ್ಮ ಬೆಂಬಲ ನೀಡುವುದಾಗಿ ಜೆಡಿಎಸ್ ಗೆ ಭರವಸೆ ನೀಡಿದ್ದಾರೆ.
ಈ ಸಂಬಂಧ ಸಾ.ರಾ ಮಹೇಶ್ ಸ್ಥಳೀಯ ನಾಯಕರನ್ನು ಸಂಪರ್ಕಿಸಿ ಹಾಗೂ ಕುಮಾರಸ್ವಾಮಿ ಅವರ ಜೊತೆ ಚರ್ಚಿಸಿ ಅಭ್ಯರ್ಥಿ ಆಯ್ಕೆ ಪ್ರಕಟಿಸಲಿದ್ದಾರೆ. ಜೊತೆಗೆ ಸ್ಥಾಯಿ ಸಮಿತಿಗಳ ಅದ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆಯೂ ಮಾಜಿ ಸಚಿಲವ ತನ್ವೀರ್ ಸೇಠ್ ವಿದೇಶದಿಂದ ವಾಪಸ್ ಬಂದ ನಂತರ ಸಭೆ ನಡೆಸಿ ಚರ್ಚಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


