ಲಿಂಗಾಯತ ಸಮುದಾಯಕ್ಕೆ ಪ್ರಾಧ್ಯಾನ್ಯತೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲಿ- ಎಂ. ಬಿ. ಪಾಟೀಲ್
ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲರ ಬಳಿಕ ಕಾಂಗ್ರೆಸ್‌ನಿಂದ ದೂರವಾಗಿರುವ ಲಿಂಗಾಯತ ಸಮುದಾಯದ ಬೆಂಬಲ ಮತ್ತೆ ಮರುಗಳಿಸಲು ಲಿಂಗಾಯತ ಸಮುದಾಯದ ಅಭ್ಯರ್ಥಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್ ಪರೋಕ್ಷವಾಗಿ ಮನದಿಂಗಿತ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲರ ಬಳಿಕ ಕಾಂಗ್ರೆಸ್‌ನಿಂದ ದೂರವಾಗಿರುವ ಲಿಂಗಾಯತ ಸಮುದಾಯದ ಬೆಂಬಲ ಮತ್ತೆ ಮರುಗಳಿಸಲು ಲಿಂಗಾಯತ ಸಮುದಾಯದ ಅಭ್ಯರ್ಥಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್ ಪರೋಕ್ಷವಾಗಿ ಮನದಿಂಗಿತ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಸಮುದಾಯದಂತೆ ಅನೇಕ ಸಮುದಾಯಗಳು ಕಾಂಗ್ರೆಸ್ ನಿಂದ ದೂರವಾಗಿವೆ. ರಾಜ್ಯದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲ ಸಮುದಾಯಗಳ ವಿಶ್ವಾಸ ಪಡೆಯುವುದು ಅಗತ್ಯವಿದೆ. ಹೀಗಾಗಿ ಕೆಪಿಸಿಸಿ ಸಾರಥ್ಯ ನೇಮಕ ಯಾವ ರೀತಿಯಲ್ಲಿ ನಡೆದರೆ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬ ಬಗ್ಗೆ ಎಐಸಿಸಿ ನಾಯಕಿ ಸೋನಿಯಾ ಗಾಂಧಿಯವರಿಗೆ ಸಲಹೆ ನೀಡಲಾಗಿದೆ. ನನ್ನನ್ನೇ ಆಯ್ಕೆ ಮಾಡಿ ಎಂದು ಎಂದಿಗೂ ಲಾಬಿ ಮಾಡಿಲ್ಲ ಎಂದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ತಮ್ಮ ಪರವಾಗಿಯೋ ಮತ್ತಿನ್ಯಾರ ಪರವಾಗಿಯೋ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆಂಬುದು ಗೊತ್ತಿಲ್ಲ. ಸಿದ್ದರಾಮಯ್ಯ ಅವರಿಲ್ಲದ ಕಾಂಗ್ರೆಸ್‌ಗೆ ಕಷ್ಟ ಕಟ್ಟಿಟ್ಟ ಬುತ್ತಿ. ಸದ್ಯಕ್ಕೆ ಅವರನ್ನು ಬಿಟ್ಟು ಪಕ್ಷ ಕಟ್ಟುವುದು ಕಷ್ಟ ಎಂದು ಅವರು ಹೇಳಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


