ಸಿದ್ದರಾಮಯ್ಯ ಅವರೇನು ಕೇಂದ್ರದ ಆರ್ಥಿಕ ಇಲಾಖೆಯ ಖಜಾಂಚಿಯಾ?: ಗೋವಿಂದ ಕಾರಜೋಳ
ಕೇಂದ್ರ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎನ್ನಲು ಸಿದ್ಧರಾಮಯ್ಯನವರೇನು ಕೇಂದ್ರದ ಖಜಾಂಚಿಯಾಗಿದ್ದಾರೆಯೇ ಎಂದು ಡಿಸಿಎಂ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ.

ಕಲಬುರಗಿ: ಕೇಂದ್ರ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎನ್ನಲು ಸಿದ್ಧರಾಮಯ್ಯನವರೇನು ಕೇಂದ್ರದ ಖಜಾಂಚಿಯಾಗಿದ್ದಾರೆಯೇ ಎಂದು ಡಿಸಿಎಂ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂಬ ಮಾಜಿ ಸಿದ್ದರಾಮಯ್ಯನವರ ಹೇಳಿಕೆಗೆ ಡಿಸಿಎಂ ಗೋವಿಂದ ಕಾರಜೋಳ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, "ಸಿದ್ದರಾಮಯ್ಯನವರೇನು ಕೇಂದ್ರ ಸರ್ಕಾರದ ಖಜಾಂಚಿಯಾಗಿದ್ದಾರೆಯೇ? ಅಥವಾ ಕೇಂದ್ರ ಸರ್ಕಾರದ ಪೆಟ್ಟಿಗೆ ಇವರ ಬಳಿ ಇದೆಯೇ," ಎಂದು ಪ್ರಶ್ನಿಸಿದ್ದಾರೆ.
ಬೊಕ್ಕಸ ದಿವಾಳಿಯಾಗಿದೆ ಎಂದು ಸಿದ್ಧರಾಮಯ್ಯ ಯಾವ ಆಧಾರದ ಮೇಲೆ ಹೇಳುತ್ತಾರೆ ಎಂದು ಪ್ರಶ್ನಿಸಿದರು. 14 ಬಾರಿ ಬಜೆಟ್ ಮಂಡಿಸಿದ್ದಾರೆ. ಐದು ವರ್ಷಗಳ ಕಾಲ ಸಿಎಂ ಸಹ ಆಗಿದ್ದವರು. ಅಂಥವರು ಈ ರೀತಿ ಮಾತನಾಡೋದು ಸರಿಯಲ್ಲ. ಹಣಕಾಸಿನ ತೌಲನಿಕ ನೋಟ ಬೇಕಿದ್ದರೆ ಕೊಡಲಿ. ಅದನ್ನು ಬಿಟ್ಟು ಹೀಗೆ ಮನಸ್ಸಿಗೆ ಬಂದಂತೆ ಹೇಳಿಕೆ ನೀಡೋದು ಸರಿಯಲ್ಲ ಎಂದು ಕಿಡಿಕಾರಿದರು.
ನೆರೆ ಪರಿಹಾರಕ್ಕಾಗಿ ಕೇಂದ್ರ ಬಿಡುಗಡೆ ಮಾಡಿರೋದು ಸಣ್ಣ ಮೊತ್ತವಲ್ಲ. ಸ್ವಾತಂತ್ರ್ಯ ಬಂದಾಗಿನಿಂದಲೂ ಇಷ್ಟು ಪ್ರಮಾಣದಲ್ಲಿ ಯಾವ ಸರ್ಕಾರವೂ ನೆರೆ ಪರಿಹಾರಕ್ಕಾಗಿ ಬಿಡುಗಡೆ ಮಾಡಿದ್ದಿಲ್ಲ. ಹೀಗಿರಬೇಕಾದರೆ ರಾಜೀಕಯಕ್ಕಾಗಿ ಮಾತಡೋದು ಸರಿಯಲ್ಲ ಎಂದು ಸಿದ್ಧರಾಯಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


