ರಾಜಕೀಯ

ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿ ಪ್ರವಾಸ ರದ್ದು

ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಕರ್ನಾಟಕಕ್ಕೆ‌ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದೆಹಲಿ ಪ್ರವಾಸ ರದ್ದಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿ ಪ್ರವಾಸ ರದ್ದು
ಸಂಗ್ರಹ ಚಿತ್ರ
Published On :

ಬೆಂಗಳೂರು: ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಕರ್ನಾಟಕಕ್ಕೆ‌ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದೆಹಲಿ ಪ್ರವಾಸ ರದ್ದಾಗಿದೆ.

ಸಚಿವ ಸಂಪುಟ ವಿಸ್ತರಣೆ ಸಂಬಂಧ ಪಕ್ಷ‌ದ ವರಿಷ್ಠರೊಡನೆ ಚರ್ಚಿಸಲು ಜನವರಿ ಎರಡನೇ ವಾರದಲ್ಲಿ ಅವರು ದೆಹಲಿಗೆ ತೆರಳಬೇಕಿತ್ತು. ಜ. 18 ರಂದು ಎನ್‌ಆರ್‌ಸಿ, ಸಿಎಎ ಅಭಿಯಾನಕ್ಕಾಗಿ ಅಮಿತ್‌ ಷಾ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಅವರ ಭೇಟಿಗೆ ಯಡಿಯೂರಪ್ಪ ಅವರಿಗೆ ಅವಕಾಶ ಸಿಕ್ಕಿಲ್ಲವಾದ್ದರಿಂದ ಮುಖ್ಯಮಂತ್ರಿಗಳ ದೆಹಲಿ ಭೇಟಿ ರದ್ದಾಗಿದೆ.

ಈ ಕುರಿತು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಚರ್ಚಿಸಲು ಅಮಿತ್ ಷಾ ಭೇಟಿಗೆ ಅವಕಾಶ ಸಿಕ್ಕಿಲ್ಲ. ಇದೇ 18 ರಂದು ಅಮಿತ್ ಷಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ವಿಷಯಗಳನ್ನು ಚರ್ಚಿಸಲಾಗುವುದು ಎಂದರು.

ಮೂಲಗಳ ಪ್ರಕಾರ, ಸಂಪುಟ ವಿಸ್ತರಣೆ ಮಾಡಿಯೇ ವಿದೇಶ ಪ್ರವಾಸ ಕೈಗೊಳ್ಳಿ ಎಂಬ ಒತ್ತಡವನ್ನು ಅರ್ಹ ಶಾಸಕರು ಮುಂದಿಟ್ಟಿದ್ದಾರೆ. ಸದ್ಯದ ಸನ್ನಿವೇಶದಲ್ಲಿ ಅದು ಸುಲಭದ ಸಂಗತಿಯಲ್ಲ. ಹೀಗಾಗಿ, ಗೊಂದಲ ಇಟ್ಟುಕೊಂಡು ವಿದೇಶ ಪ್ರವಾಸ ಕೈಗೊಳ್ಳುವುದೇ ಬೇಡ ಎಂಬ ನಿಲುವಿಗೆ ಬಂದಿದ್ದಾರೆ ಎನ್ನಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.