ಸಿದ್ದರಾಮಯ್ಯ ಭಯದಿಂದಾಗಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಆಯ್ಕೆ ಮಾಡುತ್ತಿಲ್ಲ: ಎಂಟಿಬಿ
ರಾಜ್ಯ ಕಾಂಗ್ರೆಸ್ ಅಕ್ಷರಶಃ ಮನೆಯೊಂದು ಮೂರು ಬಾಗಿಲಿನಂತಾಗಿದೆ, ಸಿದ್ದರಾಮಯ್ಯ ಅವರ ಮೇಲಿನ ಭಯದಿಂದಾಗಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಎಂದು ಮಾಜಿ ಸಚಿವ ಎಂಟಿ ಬಿ ನಾಗರಾಜ್ ಹೇಳಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಅಕ್ಷರಶಃ ಮನೆಯೊಂದು ಮೂರು ಬಾಗಿಲಿನಂತಾಗಿದೆ, ಸಿದ್ದರಾಮಯ್ಯ ಅವರ ಮೇಲಿನ ಭಯದಿಂದಾಗಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಎಂದು ಮಾಜಿ ಸಚಿವ ಎಂಟಿ ಬಿ ನಾಗರಾಜ್ ಹೇಳಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಲೋ ಕಮಾಂಡ್ ಆಗಿದೆ, ಕೆಪಿಸಿಸಿಗೆ ಈವರೆಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗದ ಸ್ಥಿತಿಗೆ ತಲುಪಲು ಇದೇ ಕಾರಣ. ಕಾಂಗ್ರೆಸ್ ಮೂರು ಗುಂಪುಗಳಾಗಿದ್ದು ಈ ಗುಂಪುಗಾರಿಕೆಯೇ ಈ ಸ್ಥಿತಿಗೆ ಕಾರಣ ಎಂದು ಲೇವಡಿ ಮಾಡಿದ್ದಾರೆ.
ರಾಜ್ಯ ಕಾಂಗ್ರೆಸ್ನಲ್ಲಿ ಮೂರು ಗುಂಪುಗಳಿವೆ. ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ. ಶಿವಕುಮಾರ್ ಹೆಸರಿನಲ್ಲಿ ಗುಂಪುಗಳಿವೆ. ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಗಾದಿಗೆ ಎಂ.ಬಿ. ಪಾಟೀಲ್ ಪರ ಲಾಬಿ ನಡೆಸುತ್ತಿದ್ದಾರೆ.
ಡಿಕೆಶಿ ಸಹ ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿದ್ದಾರೆ. ಹರಿಪ್ರಸಾದ್, ಕೆಎಚ್ ಮುನಿಯಪ್ಪ ಅವರದ್ದು ಮತ್ತೊಂದು ಬಣ ಆಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


