ಎಚ್.ಡಿ.ದೇವೇಗೌಡ ತಮ್ಮ ಮಗ ಕುಮಾರಸ್ವಾಮಿಗೆ ಸರಿಯಾಗಿ ತರಬೇತಿ ಕೊಟ್ಟಿಲ್ಲ: ಬಿಜೆಪಿ ವಾಗ್ದಾಳಿ
ಮಂಗಳೂರು ವಿಮಾನ ನಿಲ್ದಾಣದ ಬಾಂಬ್ ಘಟನೆ ಅಣಕುಪ್ರದರ್ಶನ, ಹುಡುಗಾಟ ಎಂದು ಲೇವಡಿ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದ ಬಾಂಬ್ ಘಟನೆ ಅಣಕುಪ್ರದರ್ಶನ, ಹುಡುಗಾಟ ಎಂದು ಲೇವಡಿ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಾತನಾಡಿ, ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಬಾರದು. ಅಧಿಕಾರ ಕಳೆದುಕೊಂಡ ಹತಾಷೆಯಿಂದ ಗೊಂದಲ ಸೃಷ್ಟಿಸುವ ಕೆಲಸ ಮಾಡವುದು ಸರಿಯಲ್ಲ. ಬಾಂಬ್ ಸ್ಫೋಟ ಅಣಕು ಪ್ರದರ್ಶನ ಎಂದು ಹೇಳಿದ್ದಾರೆ.
ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಅನಗತ್ಯ ಗೊಂದಲ ಮಾಡುವುದು ಬೇಡ. ಪ್ರಕರಣದಲ್ಲಿ ಭಾಗಿಯಾದವರು ಯಾರೇ ಆದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ರಾಜಕಾರಣ ಮಾಡುವ ಬದಲು ಸರ್ಕಾರದ ಜತೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ವಸತಿ ಸಚಿವ ವಿ.ಸೋಮಣ್ಣ ಮಾತನಾಡಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ತಮ್ಮ ಮಗ ಕುಮಾರಸ್ವಾಮಿಗೆ ಸರಿಯಾಗಿ ತರಬೇತಿ ಕೊಟ್ಟಿಲ್ಲ. ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದವರು ಬೇಜವಾಬ್ದಾರಿಯಾಗಿ ನಡೆದುಕೊಳ್ಳುವುದು ಸರಿಯಲ್ಲ.
ಕುಮಾರಸ್ವಾಮಿಯವರದ್ದು ಹಿಟ್ ಅಂಡ್ ರನ್ ಸಂಸ್ಕೃತಿ. ಗಂಟೆಗೊಂದು ಹೇಳಿಕೆ ಕೊಡುವ ಮೂಲಕ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


