ರಾಜಕೀಯ

ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು, ನನ್ನ‌ ಜೀನ್ ಈ ಮಣ್ಣಿನಲ್ಲಿದೆ: ಎಚ್‌.ಡಿ. ಕುಮಾರಸ್ವಾಮಿ ತಿರುಗೇಟು

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ... ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು, ನನ್ನ‌ ಜೀನ್ ಈ ಮಣ್ಣಿನಲ್ಲಿದೆ: ಎಚ್‌.ಡಿ. ಕುಮಾರಸ್ವಾಮಿ ತಿರುಗೇಟು
Published On :

ಬೆಂಗಳೂರು: ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ, ನಿಮ್ಮ ಜೀನ್ಗಳು ಪಾಕಿಸ್ತಾನದಲ್ಲಿರಬಹುದು ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು, ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.


ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, "ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು" ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು ಎಂದು ಟೀಕಿಸಿದ್ದಾರೆ.


ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ ಎಂದು ತಿರುಗೇಟು ನೀಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿಗೆ ಪಾಕ್ ಮೇಲೆ ಪ್ರೀತಿ ಬೆಳೆದಿದೆ. ಹೀಗಾಗಿ ಪಾಕ್ ಮೇಲೆ ಪ್ರೀತಿಯಿರುವ ಕುಮಾರಸ್ವಾಮಿ ದೇಶ ಬಿಟ್ಟು ತೊಲಗಲಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.