ರಾಜಕೀಯ

ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್ ಭವಿಷ್ಯದ ಮಂತ್ರಿ: ಬಿ.ಎಸ್ ಯಡಿಯೂರಪ್ಪ

ಶಾಸಕ ಎಂಎಲ್ ಎ ಸುಧಾಕರ್ ಭವಿಷ್ಯದ ಮಂತ್ರಿ ಎಂದು ಸಿಎಂ ಯಡಿಯೂರಪ್ಪ ಹೇಳುವ ಮೂಲಕ ಸುಧಾಕರ್ ಅವರಿಗೆ ಸಚಿವ ಸ್ಥಾನ ಖಚಿತ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್ ಭವಿಷ್ಯದ ಮಂತ್ರಿ: ಬಿ.ಎಸ್ ಯಡಿಯೂರಪ್ಪ
ಡಾ.ಸುಧಾಕರ್
Published On :

ಮೈಸೂರು: ಶಾಸಕ ಎಂಎಲ್ ಎ ಸುಧಾಕರ್ ಭವಿಷ್ಯದ ಮಂತ್ರಿ ಎಂದು ಸಿಎಂ ಯಡಿಯೂರಪ್ಪ ಹೇಳುವ ಮೂಲಕ ಸುಧಾಕರ್ ಅವರಿಗೆ ಸಚಿವ ಸ್ಥಾನ ಖಚಿತ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ.

ಜೆಎಸ್ ಎಸ್ ಸುತ್ತೂರು ಮಠದಲ್ಲಿ ಆಯೋಜಿಸಿದ್ದ  ಜಾತ್ರಾ ಮಹೋತ್ಸವದಲ್ಲಿ ಮಾತನಾಡಿದ ಅವರು,  ಮುಂದಿನ ಸಂಪುಟ ವಿಸ್ತರಣೆಯಲ್ಲಿ ಸುಧಾಕರ್ ಅವರಿಗೆ ಸಚಿವ ಸ್ಥಾನ ಖಚಿತ ಎಂದು ಹೇಳಿದ್ದಾರೆ. 

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಇದಕ್ಕೂ ಮೊದಲು ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸುಧಾಕರ್ ಅವರನ್ನು ಭವಿಷ್ಯದ ಸಚಿವ ಎಂದು ಬಣ್ಣಿಸಿದ್ದು ಗಮನಾರ್ಹ. ಸಚಿವರಾಗಲಿರುವ ಸುಧಾಕರ್ ಎಂದು ಯಡಿಯೂರಪ್ಪ ತಮ್ಮ ಸ್ವಾಗತ ಭಾಷಣದಲ್ಲಿ ಸಂಬೋಧಿಸಿದ್ದರು. ಇದು ಸುಧಾಕರ್ ಅವರಿಗೆ ಸಚಿವ ಪಟ್ಟ ಸಿಗುವುದು ಬಹುತೇಕ ಖಾತ್ರಿ ಎಂದೇ ವಿಶ್ಲೇಷಿಸಲಾಗುತ್ತಿದೆ.

ಇವತ್ತಿನ ಸುತ್ತೂರು ಜಾತ್ರಾ ಮಹೋತ್ಸವದ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಅಕ್ಕಪಕ್ಕದಲ್ಲಿ ಆಸೀನರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.