ರಾಜಕೀಯ

ಸಿದ್ದರಾಮಯ್ಯ ತಮ್ಮ ಸ್ಥಾನವನ್ನು ಪ್ರಧಾನಿ ಮಟ್ಟಕ್ಕೆ ಏರಿಸಿಕೊಳ್ಳುವುದು ಸರಿಯಲ್ಲ: ಪ್ರತಾಪ್ ಸಿಂಹ ವ್ಯಂಗ್ಯ

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ಸ್ಥಾನವನ್ನು ಪ್ರಧಾನಿ ಮಟ್ಟಕ್ಕೆ ಏರಿಸಿಕೊಳ್ಳಬಾರದು. ತಮ್ಮ ಬೌಂಡರಿಯನ್ನು ರಾಜ್ಯಕ್ಕೆ ಸೀಮಿತಗೊಳಿಸಿಕೊಳ್ಳುವುದು ಉತ್ತಮ’ ಎಂದು ಸಂಸದ ಪ್ರತಾಪ ಸಿಂಹ ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯ ತಮ್ಮ ಸ್ಥಾನವನ್ನು ಪ್ರಧಾನಿ ಮಟ್ಟಕ್ಕೆ ಏರಿಸಿಕೊಳ್ಳುವುದು ಸರಿಯಲ್ಲ: ಪ್ರತಾಪ್ ಸಿಂಹ ವ್ಯಂಗ್ಯ
ಪ್ರತಾಪ್ ಸಿಂಹ
Published On :

ಮೈಸೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ಸ್ಥಾನವನ್ನು ಪ್ರಧಾನಿ ಮಟ್ಟಕ್ಕೆ ಏರಿಸಿಕೊಳ್ಳಬಾರದು. ತಮ್ಮ ಬೌಂಡರಿಯನ್ನು ರಾಜ್ಯಕ್ಕೆ ಸೀಮಿತಗೊಳಿಸಿಕೊಳ್ಳುವುದು ಉತ್ತಮ’ ಎಂದು ಸಂಸದ ಪ್ರತಾಪಸಿಂಹ ವ್ಯಂಗ್ಯವಾಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗಗೆ ಮಾತನಾಡಿದ ಅವರು ಪ್ರತಿ ಬಾರಿ ನಿಮ್ಮನ್ನು ಪ್ರಶ್ನಿಸಿದಾಗ ನೀವು ಪ್ರಧಾನಿ ಹೆಸರು ಮಧ್ಯೆ ತರಬೇಡಿ ಮತ್ತು ನಿಮ್ಮ ಮಟ್ಟವನ್ನು ಪ್ರಧಾನಿಗೆ ಹೋಲಿಕೆ ಮಾಡಿಕೊಳ್ಳಬೇಡಿ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಮಾತೆತ್ತಿದರೆ ಪಿಎಂ ಕೇರ್ ಗೆ ಲೆಕ್ಕ ಕೊಡಿ ಎಂದು ಪ್ರಶ್ನಿಸುತ್ತಾರೆ. ಪ್ರಧಾನಿ ಮಟ್ಟಕ್ಕೆ ನಿಮ್ಮ ಗೌರವವನ್ನು ಹೆಚ್ಚಿಸಿಕೊಳ್ಳುವ ಸಲುವಾಗಿ ನೀವೇನಾದರೂ ಈ ರೀತಿ ಪ್ರಶ್ನೆ ಕೇಳುತ್ತಿದ್ದೀರಾ? ನಿಮ್ಮ ವ್ಯಾಪ್ತಿ ಇಲ್ಲಿಯ ಕರ್ನಾಟಕದ ಬೌಂಡರಿ ಒಳಗೇ ಇರಲಿ, ಎಲ್ಲದಕ್ಕೂ ಪ್ರಧಾನಿ ಅವರನ್ನು ಮಧ್ಯ ತರಬೇಡಿ, ನಮ್ಮನ್ನ ಕೇಳಿ. ನಾವು ಉತ್ತರಿಸುತ್ತೇವೆ ಎಂದು ಕಿಡಿಕಾರಿದರು.

ಸಿದ್ದರಾಮಯ್ಯನವರಿಗೆ ಪ್ರಶ್ನೆ ಹಾಗೂ ಟೀಕೆ ಮಾಡುವ ಎಲ್ಲಾ ಹಕ್ಕುಗಳಿವೆ. ಆತ್ಮನಿರ್ಭರ ಭಾರತದ ಸಲುವಾಗಿ ವರ್ಚ್ಯುವಲ್ ರ್ಯಾಲಿಯನ್ನು ಬಿಜಿಪಿ ಮಾಡುತ್ತಿದೆ. ಸಮಾರೋಪ ಸಮಾರಂಭದಲ್ಲಿ ಬಿ.ಎಲ್. ಸಂತೋಷ್ ಅವರ ಮಾತಿಗೆ ಸಿದ್ದರಾಮಯ್ಯ ಅವರು ಉತ್ತರ ನೀಡಿದ್ದು ವೈಯಕ್ತಿಕವಾಗಿ ಸಂತೋಷವಾಯಿತು. ಬಿ.ಎಲ್. ಸಂತೋಷ್ ಅವರ ಭಾಷಣ ಸಿದ್ದರಾಮಯ್ಯನವರನ್ನು ಆಕರ್ಷಿಸಿದೆ ಎಂದರೆ ಭಾಷಣವನ್ನು ಪೂರ್ತಿಯಾಗಿ ಕೇಳಿದ್ದಾರೆ ಎಂದರ್ಥ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.