ಕೊರೋನಾ ನಿಯಂತ್ರಣಕ್ಕಾಗಿ ಖರ್ಚಾದ ಹಣ ಎಷ್ಟು? ರಾಜ್ಯ ಸರ್ಕಾರದ ವಿರುದ್ಧ 'ಲೆಕ್ಕಕೊಡಿ' ಅಭಿಯಾನ ಪ್ರಾರಂಭಿಸಿದ ಸಿದ್ದರಾಮಯ್ಯ
ಕೊರೋನಾ ವಿರುದ್ಧ ಹೋರಾಡಲು ಸಲಕರಣೆಗಳು, ಪಿಪಿಇ ಕಿಟ್ ಗಳ ಖರೀದಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಸಾಮಾಜಿಕ ತಾಣದಲ್ಲಿ "ಲೆಕ್ಕ ಕೊಡಿ" ಅಭಿಯಾನ ಪ್ರಾರಂಭಿಸಿದ್ದಾರೆ.

ಬೆಂಗಳೂರು: ಕೊರೋನಾ ವಿರುದ್ಧ ಹೋರಾಡಲು ಸಲಕರಣೆಗಳು, ಪಿಪಿಇ ಕಿಟ್ ಗಳ ಖರೀದಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಸಾಮಾಜಿಕ ತಾಣದಲ್ಲಿ "ಲೆಕ್ಕ ಕೊಡಿ" ಅಭಿಯಾನ ಪ್ರಾರಂಭಿಸಿದ್ದಾರೆ.
ಕೋವಿಡ್-19 ನಿಯಂತ್ರಣಕ್ಕಾಗಿ ಖರ್ಚು ಮಾಡಿದ ಹಣದ ಲೆಕ್ಕ ಕೊಡುವಂತೆ ಸಿದ್ದರಾಮಯ್ಯ ಯಡಿಯೂರಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ವೀಡಿಯೋ ಸಂದೇಶ ನೀಡಿರುವ ಅವರು "ಕೊರೊನಾ ನಿಯಂತ್ರಣದ ಉದ್ದೇಶಕ್ಕಾಗಿ ಖರ್ಚು ಮಾಡಿದ ಹಣದ ಲೆಕ್ಕ ಕೊಡಿ. ಲೆಕ್ಕ ಕೇಳುವುದು ರಾಜ್ಯದ ಜನತೆಯ ಹಕ್ಕು!! ಲೆಕ್ಕ ಕೊಡುವುದು ನಿಮ್ಮ ಕರ್ತವ್ಯ!! #100PercentCorruptSarkar #LekkaKodi" ಎಂದು ಟ್ವೀಟ್ ಮಾಡಿದ್ದಾರೆ.
ಇದಲ್ಲದೆ "ಕೊರೊನಾ ನಿಯಂತ್ರಣದಲ್ಲಿ ನಡೆದಿರುವ ಭ್ರಷ್ಟಾಚಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ #LekkaKodi ಎಂಬ ಹ್ಯಾಷ್ ಟ್ಯಾಗ್‌ನೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ವಿಡಿಯೋ ಅಭಿಯಾನ ಶುರು ಮಾಡಲಾಗಿದೆ.
"ನಮ್ಮ ಪಕ್ಷದ ಎಲ್ಲ ಶಾಸಕರು, ಸಂಸದರು, ಕಾರ್ಯಕರ್ತರು ವಿಡಿಯೊ ಮಾಡಿ, ಶೇರ್ ಮಾಡುವ ಮೂಲಕ ಇದರಲ್ಲಿ ಭಾಗವಹಿಸಬೇಕೆಂದು ವಿನಂತಿ."
#LekkaKodi ಎಂದು ರಾಜ್ಯದ ಕಾಂಗ್ರೆಸ್ ನಾಯಕರಿಗೆ ಸೂಚಿಸಿದ್ದಾರೆ.
ಇನ್ನು "ಪಿಪಿಇ ಕಿಟ್, ಮಾಸ್ಕ್, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್, ಫುಡ್ ಇದಕ್ಕಾಗಿ ಖರ್ಚು ಮಾಡಿದ್ದೆಷ್ಟು..? ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ನೀಡಿದ ಅನುದಾನ ಎಷ್ಟು..? ಕೊರೊನಾ ಸಂತ್ರಸ್ತರ ಆರೈಕೆಗೆ ಖರ್ಚು ಮಾಡಿದ್ದೆಷ್ಟು ?" ಎಂದು ಸರ್ಕಾರಕ್ಕೆ ಪ್ರಶ್ನೆ ಕೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


