ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲು ಡಿಕೆ ಶಿವಕುಮಾರ್ 'ಡಿಜಿಟಲ್ ಗೇಮ್ ಪ್ಲಾನ್'!
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಸಾಮೂಹಿಕ ಡಿಜಿಟಲ್ ಪ್ರಮಾಣವಚನ ಸಮಾರಂಭದ "ಭಾರಿ ಯಶಸ್ಸಿನ" ನಂತರ, ಡಿ ಕೆ ಶಿವಕುಮಾರ್ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲು ಡಿಜಿಟಲ್ ತಂತ್ರಜ್ಞಾನದ ಮೊರೆ ಹೋಗುತ್ತಿದ್ದಾರೆ.

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಸಾಮೂಹಿಕ ಡಿಜಿಟಲ್ ಪ್ರಮಾಣವಚನ ಸಮಾರಂಭದ "ಭಾರಿ ಯಶಸ್ಸಿನ" ನಂತರ, ಡಿ ಕೆ ಶಿವಕುಮಾರ್ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲು ಡಿಜಿಟಲ್ ತಂತ್ರಜ್ಞಾನದ ಮೊರೆ ಹೋಗುತ್ತಿದ್ದಾರೆ.
ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಸಂಘಟನೆ ಹಾಗೂ ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಾಮಾಜಿಕ ಜಾಲತಾಣಗಳ ಬಳಕೆ ಹೇಗೆ ಮಾಡಬೇಕು ಎಂಬ ಕುರಿತಾಗಿ ಚರ್ಚೆ ನಡೆಯಿತು.
ಕೊರೊನಾ ಲಾಕ್‌ಡೌನ್ ಅವಧಿಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳನ್ನು ಹೇಗೆ ಬಳಸಬಹುದು ಎಂಬ ನಿಟ್ಟಿನಲ್ಲಿ ಮುಖಂಡರ ಜೊತೆಗೆ ಸಮಾಲೋಚನೆ ನಡೆಸಿದರು.
ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಡಿಜಿಟಲ್ ತಂತ್ರಜ್ಞಾನ ಹಾಗೂ ಸಾಮಾಜಿಕ ಜಾಲತಾಣಗಳ ಬಳಕೆಗೆ ಆದ್ಯತೆ ನೀಡುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಸಮಾರಂಭದಲ್ಲೂ ಡಿಜಿಟಲ್ ತಂತ್ರಜ್ಞಾನ ಹಾಗೂ ಸಾಮಾಜಿಕ ಜಾಲತಾಣಗಳನ್ನು ಸಮರ್ಪಕವಾಗಿ ಬಳಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


