ರಾಜಕೀಯ

ಈ ಗುರಿ ಮುಟ್ಟಲು ಬಳಸಿದ ದಾರಿಯ ಬಗ್ಗೆ ಆತ್ಮಸಾಕ್ಷಿಯನ್ನು‌ ಪ್ರಶ್ನಿಸಿಕೊಳ್ಳಿ: ಸಿಎಂಗೆ ಸಿದ್ದರಾಮಯ್ಯ ಟಾಂಗ್

ಮುಖ್ಯಮಂತ್ರಿಯಾಗಿ ಒಂದು ವರ್ಷ‌ ಪೂರೈಸಿದ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಭಿನಂದನೆಗಳು. ಮುಖ್ಯಮಂತ್ರಿಯಾಗುವ ಗುರಿ ತಲುಪಿ ವರ್ಷ ಕಳೆದ ಸಂಭ್ರಮದಲ್ಲಿರುವ ನೀವು ತುಸು ಬಿಡುವು ಮಾಡಿಕೊಂಡು...

ಈ ಗುರಿ ಮುಟ್ಟಲು ಬಳಸಿದ ದಾರಿಯ ಬಗ್ಗೆ ಆತ್ಮಸಾಕ್ಷಿಯನ್ನು‌ ಪ್ರಶ್ನಿಸಿಕೊಳ್ಳಿ: ಸಿಎಂಗೆ ಸಿದ್ದರಾಮಯ್ಯ ಟಾಂಗ್
ಸಿದ್ದರಾಮಯ್ಯ
Published On :

ಬೆಂಗಳೂರು: ಮುಖ್ಯಮಂತ್ರಿಯಾಗಿ ಒಂದು ವರ್ಷ‌ ಪೂರೈಸಿದ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಭಿನಂದನೆಗಳು. ಮುಖ್ಯಮಂತ್ರಿಯಾಗುವ ಗುರಿ ತಲುಪಿ ವರ್ಷ ಕಳೆದ ಸಂಭ್ರಮದಲ್ಲಿರುವ ನೀವು ತುಸು ಬಿಡುವು ಮಾಡಿಕೊಂಡು, ಈ ಗುರಿ ಮುಟ್ಟಲು ಬಳಸಿದ ದಾರಿಯ ಬಗ್ಗೆ ನಿಮ್ಮ ಆತ್ಮಸಾಕ್ಷಿಯನ್ನು‌ ಪ್ರಶಿಸಿಕೊಳ್ಳಿ. ನಿಮ್ಮ 'ಸಾಧನೆ' ಯ ಬಗ್ಗೆ ಮುಂದೆ ಮಾತನಾಡೋಣ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಎಸ್ ವೈ ಆಪರೇಷನ್ ಕಮಲಕ್ಕೆ ಟಾಂಗ್ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ, ಪರೋಕ್ಷವಾಗಿ ಆಪರೇಷನ್ ಕಮಲವನ್ನು ಪ್ರಸ್ತಾಪಿಸಿ ಮುಖ್ಯಮಂತ್ರಿಯವರನ್ನು ಕುಟುಕಿದ್ದಾರೆ.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನಿನ್ನೆಗೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ವಿಶೇಷ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿತ್ತು.

ರಾಜಸ್ತಾನದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿರುವ ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಅನುಸರಿಸುತ್ತಿದೆ. ಬಿಜೆಪಿಯ ಈ ಷಡ್ಯಂತ್ರದಲ್ಲಿ ರಾಜಸ್ಥಾನದ ರಾಜ್ಯಪಾಲರೂ ಭಾಗಿಯಾಗಿದ್ದಾರೆ. ಸಚಿವ ಸಂಪುಟದ ತೀರ್ಮಾನದಂತೆ ನಡೆದುಕೊಳ್ಳುವುದು ರಾಜ್ಯಪಾಲರ ಕರ್ತವ್ಯ. ಆದರೆ, ಅವರು ಆ ಪಕ್ಷಕ್ಕೆ ಸಹಕಾರ ನೀಡಲು ಅವರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದ್ದಾರೆ.

ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ' ಘೋಷವಾಕ್ಯದೊಂದಿಗೆ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.