ರಾಜಕೀಯ

'ವರ್ಷ ಪೂರೈಸುತ್ತಿರೋ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿಗಳೇ ಇಲ್ಲ': ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?

ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ ಎಂಬ ಬೀಜ ಮಂತ್ರ ಪಠಿಸುತ್ತಿರುವ ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಗೆ ಪಿಂಚಣಿ ಹಣಕ್ಕಾಗಿ ಕಳೆದ 5 ತಿಂಗಳಿಂದ ಫಲಾನುಭವಿಗಳೂ ಅಲೆದಾಡುತ್ತಿರುವುದೇ ಸಾಕ್ಷಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

'ವರ್ಷ ಪೂರೈಸುತ್ತಿರೋ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿಗಳೇ ಇಲ್ಲ': ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?
ಕುಮಾರಸ್ವಾಮಿ
Published On :

ಬೆಂಗಳೂರು: ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ ಎಂಬ ಬೀಜ ಮಂತ್ರ ಪಠಿಸುತ್ತಿರುವ ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಗೆ ಪಿಂಚಣಿ ಹಣಕ್ಕಾಗಿ ಕಳೆದ 5 ತಿಂಗಳಿಂದ ಫಲಾನುಭವಿಗಳೂ ಅಲೆದಾಡುತ್ತಿರುವುದೇ ಸಾಕ್ಷಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. 

ವೃದ್ಧಾಪ್ಯ, ವಿಧವಾ ಮತ್ತು ಅಂಗವಿಕಲ ಫಲಾನುಭವಿಗಳನ್ನು ತಹಶೀಲ್ದಾರ್ ಕಚೇರಿಗಳಿಗೆ ಅಲೆದಾಡಿಸುತ್ತಿರುವುದಕ್ಕಿಂತ ಬೇರೆ ಉದಾಹರಣೆ ಬೇಕೆ? ಅಂಗೈ ಹುಣ್ಣಿಗೆ ಕನ್ನಡಿ ಏಕೆ ಎಂದು ಪ್ರಶ್ನಿಸಿದ್ದಾರೆ.

ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ರಚನೆಯಾಗಿ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ಒಂದು ವರ್ಷದ ಸಾಧನೆಯನ್ನು ಟೀಕಿಸಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಇದು ಕಣ್ಣು ಕಿವಿ ಇಲ್ಲದ ನಾಚಿಕೆಗೇಡಿನ ಸರ್ಕಾರ ಎಂದು ಟೀಕಿಸಿದ್ದಾರೆ. 

ಕೊರೋನಾ ಸಂಕಷ್ಟದ ಸಮಯದಲ್ಲಿ ಸಕಾಲಕ್ಕೆ ಪಿಂಚಣಿ ಕೈಗೆ ಸಿಗದೇ ಅಗತ್ಯ ಔಷಧಗಳನ್ನು ಕೊಳ್ಳಲೂ ಆಗದೇ ಈ ಫಲಾನುಭವಿಗಳು ಪರದಾಡುತ್ತಿದ್ದಾರೆ. ಹಲವು ಮಂದಿಗೆ ಊಟಕ್ಕೂ ತತ್ವಾರವಾಗಿದೆ. ಐದಾರು ತಿಂಗಳಿನಿಂದ ಪಿಂಚಣಿ ಹಣ ಪಾವತಿಯಾಗದೇ ಅಂಗವಿಕಲರು, ವೃದ್ಧರು ಹಾಗೂ ವಿಧವೆಯರು ಪರಿತಪಿಸುತ್ತಿದ್ದಾರೆ ಎಂದು ಒತ್ತಿ ಹೇಳಿರುವ ಕುಮಾರಸ್ವಾಮಿ, ವರ್ಷಾಚರಣೆಯ ಸಂಭ್ರಮದಲ್ಲಿರುವ ಬಿಜೆಪಿ ಸರ್ಕಾರ ಮೊದಲು ಇವರ ಪಿಂಚಣಿ ಹಣ ಬಿಡುಗಡೆಗೆ ಆದೇಶಿಸಲಿ. ಈ ನಿಟ್ಟಿನಲ್ಲಿ ಆದಷ್ಟು ಬೇಗ ತುರ್ತು ಕ್ರಮ ಕೈಗೊಳ್ಳಲಿ ಎಂದು ಸರ್ಕಾರವನ್ನು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.