ರಾಜಕೀಯ

ಲಕ್ಷ್ಮಣ ಸವದಿ ಅವರ ದೆಹಲಿ ಭೇಟಿಯಿಂದ ಯಾವುದೇ ಹೆದರಿಕೆಯಿಲ್ಲ

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ

ಲಕ್ಷ್ಮಣ ಸವದಿ ಅವರ ದೆಹಲಿ ಭೇಟಿಯಿಂದ ಯಾವುದೇ ಹೆದರಿಕೆಯಿಲ್ಲ
ಲಕ್ಷ್ಮಣ ಸವದಿ
Published On :

ಬೆಂಗಳೂರು:  ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. 

ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಾಧನಾ ಸಮಾರಂಭದಲ್ಲೂ ಭಾಗಿಯಾಗದೆ ಲಕ್ಷ್ಮಣ ಸವದಿ ದೆಹಲಿಗೆ ತೆರಳಿದ್ದರು. 

ದೆಹಲಿಯಲ್ಲಿ ಬಿಜೆಪಿಯ ಕೆಲವು ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು, ಈ ಭೇಟಿ ಸಿಎಂ ಯಡಿಯೂರಪ್ಪ ಅವರ ಕುರ್ಚಿಗೆ ಕುತ್ತು ತರುವ ಸಾಧ್ಯತೆಯಿದೆ ಎಂದು ಸಿಎಂ ಆಪ್ತರು ಹೇಳುತ್ತಿದ್ದಾರೆ.

ತಾವು ಸಿಎಂ ಆಗಬೇಕು ಎಂದು ಕನಸು ಕಾಣುತ್ತಿರುವ ಸವದಿ ಅವರು ಸರ್ಕಾರ 1 ವರ್ಷ ಪೂರೈಸಿದ ದಿನವೇ ಕೇಂದ್ರ ನಾಯಕರನ್ನು ಭೇಟಿ ಮಾಡಿ ನಾಕತ್ವ ಬದಲಾವಣೆ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ಮುಂದಿನ ಸಂಪುಟ ಪುನಾರಚನೆಯಲ್ಲಿ ತಮ್ಮನ್ನು ಕೈ ಬಿಡದಂತೆ ಕೇಂದ್ರ ನಾಯಕರಲ್ಲಿ ಸವದಿ ಮನವಿ ಮಾಡಲು ಹೊರಟಿದ್ದರು ಎಂದು ಹೇಳಲಾಗಿದೆ, ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಸಿಎಂ, ಸವದಿ ದೆಹಲಿ ಭೇಟಿಗೆ ಯಾವುದೇ ವಿಶೇಷ ಅರ್ಥ ಕಲ್ಪಿಸಬೇಡಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.