ರಾಜಕೀಯ

5 ಬಿಜೆಪಿ ಎಂಎಲ್'ಸಿಗಳ ಪ್ರಮಾಣವಚನ ಇಂದು

ಇತ್ತೀಚೆಗೆ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡ ಬಿಜೆಪಿಯ ಐವರು ಸದಸ್ಯರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

5 ಬಿಜೆಪಿ ಎಂಎಲ್'ಸಿಗಳ ಪ್ರಮಾಣವಚನ ಇಂದು
ಸಂಗ್ರಹ ಚಿತ್ರ
Published On :

ಬೆಂಗಳೂರು: ಇತ್ತೀಚೆಗೆ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡ ಬಿಜೆಪಿಯ ಐವರು ಸದಸ್ಯರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. 

ಸಿಪಿ ಯೋಗೇಶ್ವರ್, ಹೆಚ್.ವಿಶ್ವನಾಥ್, ಭಾರತಿ ಶೆಟ್ಟಿ, ಶಾಂತಾರಾಮ್ ಸಿದ್ಧಿ, ಡಾ.ಸಾಬಣ್ಣ ತಳವಾರ್ ಅವರು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆಂದು ತಿಳಿದುಬಂದಿದೆ. 

ನೂತನ ಎಂಎಲ್'ಸಿಗಳು ಸೋಮವಾರವೇ ಪ್ರಮಾಣವಚನ ಸ್ವೀಕಾರ ಮಾಡಬೇಕಿತ್ತು. ಆದರೆ, ವಿಧಾನ ಪರಿಷತ್ ಅಧ್ಯಕ್ಷ ಪ್ರತಾಪ್ ಚಂದ್ರಶೆಟ್ಟಿಯವರು ಕ್ವಾರಂಟೈನ್ ನಲ್ಲಿರುವುದರಿಂದ ಇದು ಸಾಧ್ಯವಾಗಿರಲಿಲ್ಲ. 

ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿಗೆ ಪಕ್ಷಾಂತರಗೊಂಡಿದ್ದ ಮಾಜಿ ಸಚಿವ ಯೋಗೇಶ್ವರ ಮತ್ತು ಜೆಡಿಎಸ್ ಪಕ್ಷದ ಮಾಜಿ ಅಧ್ಯಕ್ಷ ವಿಶ್ವನಾಥ್ ಅವರು ಕೂಡ ಇಂದು ಎಂಎಲ್‌ಸಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಒಟ್ಟಾರೆ 75ರ ಪೈಕಿ ವಿಧಾನಪರಿಷತ್ ನಲ್ಲಿ 71 ಮಂದಿ ಸದಸ್ಯರಿದ್ದಾರೆ. ಶಿಕ್ಷಣ ಕ್ಷೇತ್ರದಿಂದ ಹಾಗೂ ಪದವೀಧರ ಕ್ಷೇತ್ರದಿಂದ ಎರಡೆರಡು ಸ್ಥಾನಗಳು ಖಾಲಿಯಿದ್ದು, ಕೊರೋನಾ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.