ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ನಳಿನ್ ಕುಮಾರ್ ಕಟೀಲ್
ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ಅನಗತ್ಯ. ಇದು ಕೇವಲ ಮಾಧ್ಯಮಗಳ ಚರ್ಚೆಯಷ್ಟೇ. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಇನ್ನೂ ಮೂರು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ಅನಗತ್ಯ. ಇದು ಕೇವಲ ಮಾಧ್ಯಮಗಳ ಚರ್ಚೆಯಷ್ಟೇ. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಇನ್ನೂ ಮೂರು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.
ಶ್ರವಣಬೆಳಗೊಳದಲ್ಲಿ ಬಿಜೆಪಿ ಕಾರ್ಯಕರೊಂದಿಗೆ ಸಭೆ ನಡೆಸುವುದಕ್ಕೂ ಮುನ್ನ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಯಾವುದೇ ನಾಯಕರೂ ಕೂಡ ಮುಖ್ಯಮಂತ್ರಿ ಕುರ್ಚಿಗಾಗಿ ಲಾಬಿ ನಡೆಸುತ್ತಿಲ್ಲ. ಇದು ಕೇವಲ ಮಾಧ್ಯಮಗಳೂ ಊಹಾಪೋಹವಷ್ಟೇ ಎಂದು ಹೇಳಿದ್ದಾರೆ.
ಇದೇ ವೇಳೆ ಕೊರೋನಾ ಪರಿಸ್ಥಿತಿಯಲ್ಲಿ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಅವರು, 60 ವರ್ಷಗಳ ಕಾಲ ರಾಷ್ಟ್ರವನ್ನು ಆಳುತ್ತಿದ್ದರೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವೈದ್ಯರನ್ನು ನೇಮಕ ಮಾಡುವಲ್ಲಿ ವಿಫಲವಾದವರಿಗೆ ಬಿಜೆಪಿಯನ್ನು ಟೀಕಿಸುವ, ದೂಷಿಸುವ ನೈತಿಕ ಹಕ್ಕು ಅವರಿಗಿಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


