ರಾಜಕೀಯ

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದ ಸೋನಿಯಾ

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಈ ತಿಂಗಳ 19 ರಂದು ನಡೆಯಲಿರುವ ದೈವಾರ್ಷಿಕ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿಗಳು ಸ್ಪರ್ಧಿಸಲಿದ್ದು, ಇದೇ ಮೊದಲ ಬಾರಿಗೆ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಮೇಲ್ಮನೆ ಪ್ರವೇಶಿಸುವುದು ಬಹತೇಕ ಖಚಿತವಾಗಿದೆ.

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದ ಸೋನಿಯಾ
ಮಲ್ಲಿಕಾರ್ಜುನ ಖರ್ಗೆ
Published On :

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಈ ತಿಂಗಳ 19 ರಂದು ನಡೆಯಲಿರುವ ದೈವಾರ್ಷಿಕ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿಗಳು ಸ್ಪರ್ಧಿಸಲಿದ್ದು, ಇದೇ ಮೊದಲ ಬಾರಿಗೆ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ  ಖರ್ಗೆ ಅವರು ಮೇಲ್ಮನೆ ಪ್ರವೇಶಿಸುವುದು ಬಹತೇಕ ಖಚಿತವಾಗಿದೆ. 

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶುಕ್ರವಾರ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕೃತವಾಗಿ ಕಾಂಗ್ರೆಸ್ ಟಿಕೆಟ್ ಘೋಷಿಸಿದ್ದಾರೆ.

ಸೋಲಿಲ್ಲದ ಸರದಾರ ಎಂದು ಗುರುತಿಸಿಕೊಂಡಿದ್ದ ಖರ್ಗೆ ಅವರು ಕಳೆದ ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ಈಗ ಇದೇ ಮೊದಲ ಬಾರಿಗೆ ಕಾಂಗ್ರೆಸ್ ನಿಂದ ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದಾರೆ.

ಈಗಿರುವ ಸಂಖ್ಯಾಬಲದ ಆಧಾರದ ಮೇಲೆ  ಕಾಂಗ್ರೆಸ್ ಗೆ 1, ಬಿಜೆಪಿಗೆ 2 ಸ್ಥಾನಗಳು ದೊರೆಯುವುದು ಬಹುತೇಕ ಖಚಿತವಾಗಿದ್ದು, ಮತ್ತೊಂದು ಸ್ಥಾನಕ್ಕಾಗಿ ಕಾಂಗ್ರೆಸ್ – ಜೆಡಿಎಸ್ ನಡುವೆ ಹೊಂದಾಣಿಕೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಲಿದೆ.  ಜೆಡಿಎಸ್ ನ ಕುಪೇಂದ್ರ ರೆಡ್ಡಿ, ಬಿಜೆಪಿಯ ಪ್ರಭಾಕರ್ ಕೋರೆ, ಕಾಂಗ್ರೆಸ್ ನ ರಾಜೀವ್ ಗೌಡ,  ಬಿ.ಕೆ.ಹರಿಪ್ರಸಾದ್ ನಿವೃತ್ತಿಯಾಗುತ್ತಿದ್ದಾರೆ. ಇವರ ಸ್ಥಾನಗಳಿಗೆ ಈಗ ಚುನಾವಣೆ ನಡೆಯಲಿದೆ. ನಾಮ ಪತ್ರ ಸಲ್ಲಿಕೆಗೆ ಜೂನ್ ೯ ಕೊನೆಯ ದಿನವಾಗಿದ್ದು, ರಾಜಕೀಯ ಚಟುವಟಿಕೆ ಗರಿಗೆದರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.