ರಾಜಕೀಯ

ಜೆಡಿಎಸ್ ಬೆಂಬಲಿಸುವ ಬಗ್ಗೆ ಇನ್ನೂ ನಿರ್ಣಯವಾಗಿಲ್ಲ: ಡಿ.ಕೆ. ಶಿವಕುಮಾರ್

ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆಗೆ ಅಭ್ಯರ್ಥಿಯನ್ನಾಗಿಸುವ ಬಗ್ಗೆ ರಾಷ್ಟ್ರೀಯ ನಾಯಕರು ತೀರ್ಮಾನಿಸಿದ್ದು, ಜೆಡಿಎಸ್ ಅನ್ನು ಬೆಂಬಲಿಸುವ ಬಗ್ಗೆ ಇನ್ನೂ ಯಾವುದೇ ನಿರ್ಣಯ ಕೈಗೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಜೆಡಿಎಸ್ ಬೆಂಬಲಿಸುವ ಬಗ್ಗೆ ಇನ್ನೂ ನಿರ್ಣಯವಾಗಿಲ್ಲ: ಡಿ.ಕೆ. ಶಿವಕುಮಾರ್
ಡಿಕೆ.ಶಿವಕುಮಾರ್
Published On :

ಬೆಂಗಳೂರು: ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆಗೆ ಅಭ್ಯರ್ಥಿಯನ್ನಾಗಿಸುವ ಬಗ್ಗೆ ರಾಷ್ಟ್ರೀಯ ನಾಯಕರು ತೀರ್ಮಾನಿಸಿದ್ದು, ಜೆಡಿಎಸ್ ಅನ್ನು ಬೆಂಬಲಿಸುವ ಬಗ್ಗೆ ಇನ್ನೂ ಯಾವುದೇ ನಿರ್ಣಯ ಕೈಗೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಜೆಡಿಎಸ್ ಇದುವರೆಗೂ ನಮ್ಮ ಬಳಿ ಬೆಂಬಲ ಕೇಳಿಲ್ಲ. ಪಕ್ಷದ ಅಧ್ಯಕ್ಷನಾಗಿರುವ ತಮ್ಮನ್ನು ಯಾರೂ ಸಹ ಬೆಂಬಲ ಕೇಳಿಲ್ಲ. ಬೆಂಬಲ ಬಗ್ಗೆ ಪಕ್ಷಗಳ ಸಿದ್ಧಾಂತ ವಿಚಾರದ ಮೇಲೆ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ ಎಂದರು.

ಬಿಜೆಪಿಗೆ ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಬರುತ್ತೇವೆ ಎಂಬ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಕಿಡಿಕಾರಿದ ಡಿ‌.ಕೆ.ಶಿವಕುಮಾರ್, ಯಾರೋ ಮೆಂಟಲ್ ಗಳು ಏನೇನೋ ಮಾತನಾಡುತ್ತಾರೆ. 30, 40, 50 ಕಡ್ಲೆಪುರಿ ವ್ಯಾಪಾರ ಮಾಡುತ್ತಾರೆ. ನಮ್ಮ ಶಾಸಕರಿಗೆ ಅಗೌರವ ಕೊಡುವುದು ಬೇಡ. ಯಾರು ಯಾರು ಏನೇನು ಮಾತನಾಡುತ್ತಾರೆ, ಸಭೆ ಮಾಡುತ್ತಾರೆ,ಯಾವ ಹೊಟೇಲ್ ನಲ್ಲಿ ಸಭೆ ಮಾಡಿದ್ದಾರೆ, ಯಾರನ್ನು ಕಾಯುತ್ತಿದ್ದರು ಎಂಬುದೆಲ್ಲವೂ ತಮಗೆ ಗೊತ್ತು. ನಾವು ಏನು ಸುಮ್ಮನೆ ಕುಳಿತಿಲ್ಲ. ನಮಗೆ ಬೇರೆಯವರ ವಿಚಾರ ಬೇಡ. ನಾವುಂಟು ನಮ್ಮ ಶಾಸಕರು ಉಂಟು ಎಂದು ಮಾರ್ಮಿಕವಾಗಿ ನುಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.