ಟ್ರ್ಯಾಕ್ಟರ್, ವಾಹನ ಇರುವ ರೈತರು ಬಿಪಿಎಲ್ ಕಾರ್ಡ್ ಹಿಂತಿರುಗಿಸಿ: ಸರ್ಕಾರದ ನಿಲುವಿಗೆ ಕುಮಾರಸ್ವಾಮಿ ಗರಂ
ಟ್ರ್ಯಾಕ್ಟರ್, ವಾಹನ ಇರುವ ರೈತರು ಬಿಪಿಎಲ್ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎನ್ನುವ ಸಿಎಂ ಯಡಿಯೂರಪ್ಪ ಅವರ ಸೂಚನೆ ಮೂರ್ಖತನದಿಂದ ಕೂಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಟ್ರ್ಯಾಕ್ಟರ್, ವಾಹನ ಇರುವ ರೈತರು ಬಿಪಿಎಲ್ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎನ್ನುವ ಸಿಎಂ ಯಡಿಯೂರಪ್ಪ ಅವರ ಸೂಚನೆ ಮೂರ್ಖತನದಿಂದ ಕೂಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ರೈತರ ಪರವಾಗಿ ಸರ್ಕಾರ ನಡೆಸುವೆನೆಂದ ಯಡಿಯೂರಪ್ಪ ಅವರ ನಿಲುವಿನ ವಿರುದ್ಧ ಕಿಡಿ ಕಾರಿರುವ ಕುಮಾರಸ್ವಾಮಿ ಈ ಸಂಬಂಧ ಸರಣಿ ಟ್ವೀಟ್ ಮಾಡಿದ್ದಾರೆ.
"ಟ್ರ್ಯಾಕ್ಟರ್, ವಾಹನ ಇರುವ ರೈತರು ಬಿಪಿಎಲ್ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಇದು ಮೂರ್ಖತನದ ಸೂಚನೆ. ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ.
"ರೈತರಿಗೆ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಹೇಳಿರುವ ಸರ್ಕಾರ ಅದಕ್ಕೆ ಟ್ರ್ಯಾಕ್ಟರ್, ವಾಹನಗಳನ್ನು ಮಾನದಂಡ ಮಾಡಿದೆ. ವೈಜ್ಞಾನಿಕ ಕೃಷಿ, ಟ್ರಾಕ್ಟರ್ ಖರೀದಿಗೆ ಪ್ರೋತ್ಸಾಹ ನೀಡುತ್ತಿರುವುದು ಸರ್ಕಾರಗಳೇ ಅಲ್ಲವೇ? ಟ್ರ್ಯಾಕ್ಟರ್ ಖರೀದಿಸಲು ಹೇಳಿ, ಅದನ್ನೇ ಮುಂದಿಟ್ಟು ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವುದು ಮೂರ್ಖತನವಲ್ಲವೇ?
“ಇಂದಿನ ಪೈಪೋಟಿ ಯುಗದಲ್ಲಿ ಕೃಷಿಕ ಯಂತ್ರ, ವಾಹನಗಳನ್ನು ಹೊಂದುವುದು ಅಗತ್ಯ. ಸರ್ಕಾರ ಅದಕ್ಕೆ ಪ್ರೋತ್ಸಾಹ ನೀಡಬೇಕು. ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಬೆದರಿಕೆಯೊಡ್ಡಬಾರದು. ಬಿಪಿಎಲ್ ಕಾರ್ಡ್ ಈಗ ಕೇವಲ ಪಡಿತರಕ್ಕೆ ಮಾತ್ರ ಸೀಮಿತವಲ್ಲ. ಹಲವು ಸವಲತ್ತು, ಸೌಲಭ್ಯಗಳಿಗೆ ಬಿಪಿಎಲ್ ಕಾರ್ಡೇ ಆಧಾರ ಎಂಬುದು ಸರ್ಕಾರದ ಗಮನದಲ್ಲಿರಲಿ.
“ಅರ್ಹ ಫಲಾನುಭವಿಗಳಿಗೆ ಸವಲತ್ತು ಸಿಗಬೇಕು. ಅದಕ್ಕಾಗಿ ರೈತರ ಅನ್ನದ ತಟ್ಟೆಗೆ ಕೈ ಹಾಕಬಾರದು. ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆಯಲ್ಲಿ ದೋಷಗಳಿವೆ. ಪಟ್ಟಭದ್ರ ಹಿತಾಸಕ್ತಿಗಳಿವೆ. ಅದನ್ನು ಮೊದಲು ಹೋಗಲಾಡಿಸಬೇಕು. ಸರ್ಕಾರ ಅದರತ್ತ ಗಮನ ಹರಿಸಲಿ. ಮಾತಿಗೆ ಮೊದಲು ರೈತರ ಕೊರಳು ಹಿಂಡುವ ತನ್ನ ಎಂದಿನ ಅಭ್ಯಾಸವನ್ನು ಸರ್ಕಾರ ತೊರೆಯಲಿ.” ಕುಮಾರಸ್ವಾಮಿ ಟ್ವೀಟ್ ಮಾಡಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಇತ್ತೀಚೆಗೆ ನಡೆದಿದ್ದ ಆಹಾರ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ್ದ ಸಿಎಂ ಯಡಿಯೂರಪ್ಪ “ಸರ್ಕಾರಿ ನೌಕರರು, ಟ್ರಾಕ್ಟರ್ ಹಾಗೂ ಇತರೆ ವಾಹನ ಮಾಲೀಕರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅದನ್ನು ತಕ್ಷಣ ಹಿಂತಿರುಗಿಸಬೇಕು. ಇಲ್ಲವೇ ಕಾನೂನು ಕ್ರಮ ಜರುಗಿಸಲಾಗುತ್ತದೆ” ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


