ರಾಜ್ಯಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ: ಕೋರೆ-ಕತ್ತಿಗೆ ಸಿಗದ ಟಿಕೆಟ್
ಬಳ್ಳಾರಿ ಬಿಜೆಪಿ ವಿಭಾಗದ ಪ್ರಬಾರಿ ಆಗಿರುವ ಅಶೋಕ್ ಗಸ್ತಿ, ಬೆಳಗಾವಿ ಬಿಜೆಪಿ ವಿಭಾಗದ ಪ್ರಭಾರಿ ಈರಣ್ಣ ಕಡಾಡಿ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದು, ಉತ್ತರ ಕರ್ನಾಟಕದ ಅಭ್ಯರ್ಥಿಗಳಿಗೆ ಮಣೆ ಹಾಕಿದೆ.
ಬಳ್ಳಾರಿ ಬಿಜೆಪಿ ವಿಭಾಗದ ಪ್ರಬಾರಿ ಆಗಿರುವ ಅಶೋಕ್ ಗಸ್ತಿ, ಬೆಳಗಾವಿ ಬಿಜೆಪಿ ವಿಭಾಗದ ಪ್ರಭಾರಿ ಈರಣ್ಣ ಕಡಾಡಿ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ಜೂನ್ 19 ರಂದು ನಡೆಯುವ ನಾಲ್ಕು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿದೆ.
ರಾಯಚೂರಿನವರಾದ ಅಶೋಕ್ ಗಸ್ತಿ ಸವಿತಾ ಸಮಾಜಕ್ಕೆ ಸೇರಿದವರು. ಹಾಗೂ ಬೆಳಗಾವಿಯವರಾದ ಈರಣ್ಣ ಕಡಾಡಿ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ವಿಶೇಷ ಅಂದರೆ ಇವರಿಬ್ಬರು ಉತ್ತರ ಕರ್ನಾಟಕಕ್ಕೆ ಸೇರಿದವರು.
ರಾಜ್ಯ ಸಭೆ ಚುನಾವಣೆ ಟಿಕೆಟ್ ನ ಪ್ರಬಲ ಆಕಾಂಕ್ಷಿಗಳಾಗಿದ್ದ ಹಾಲಿ ಸದಸ್ಯ ಪ್ರಭಾಕರ ಕೋರೆ ಮತ್ತು ರಮೇಶ್ ಕತ್ತಿ ಮತ್ತು ಪ್ರಕಾಶ್ ಶೆಟ್ಟಿ ಅವರಿಗೆ ಟಿಕೆಟ್ ಕೈತಪ್ಪಿದೆ, ವಿಧಾನಸಭೆಯಲ್ಲಿ 117 ಶಾಸಕರ ಬಲ ಹೊಂದಿರುವ ಬಿಜೆಪಿ 2 ಸ್ಥಾನದಲ್ಲಿ ಸುಲಭವಾಗಿ ಜಯಗಳಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


