ರಾಜಕೀಯ

ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿ ಮೇರೆಗೆ ದೇವೇಗೌಡರು ರಾಜ್ಯಸಭೆ ಕಣಕ್ಕೆ: ಕುಮಾರಸ್ವಾಮಿ

ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿ ಮೇರೆಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿ ಮೇರೆಗೆ ದೇವೇಗೌಡರು ರಾಜ್ಯಸಭೆ ಕಣಕ್ಕೆ: ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ, ದೇವೇಗೌಡ
Published On :

ಬೆಂಗಳೂರು: ಪಕ್ಷದ ಶಾಸಕರು, ಕಾಂಗ್ರೆಸ್  ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿ ಮೇರೆಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ನಾಳೆ ದೇವೇಗೌಡರು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿಸಿದ ದೇವೇಗೌಡರಿಗೆ ಧನ್ಯವಾದಗಳು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. 

ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನು ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನತ ಸ್ಥಾನಕ್ಕೇರಿದ್ದ ಜನನಾಯಕ ದೇವೇಗೌಡರನ್ನು ರಾಜ್ಯಸಭೆ ಪ್ರವೇಶಿಸುವಂತೆ ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ. ಆದರೆ ಎಲ್ಲರ ಆಶೋತ್ತರಗಳಿಗೆ ಪ್ರೀತಿಪೂರ್ವಕವಾಗಿ ಮಣಿದಿದ್ದಾರೆ. ರಾಜ್ಯಸಭೆಯಲ್ಲಿ ದೇವೇಗೌಡರು ರಾಜ್ಯದ ಅಗ್ರ ಪ್ರತಿನಿಧಿಯಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.