ಬಿಜೆಪಿಯಿಂದ ಕಾರ್ಯಕರ್ತರಿಗೆ ಉತ್ತಮ ಕೊಡುಗೆ: ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ ಕುರಿತು ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ
ರಾಜ್ಯ ಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಚ್ಚರಿಯ ಆಯ್ಕೆ ಮಾಡುವ ಮೂಲಕ ಬಿಜೆಪಿ ನಾಯಕರಿಗೆ ಶಾಕ್ ನೀಡಿದೆ.ಪಕ್ಷ ನಿಷ್ಠ ಕಾರ್ಯಕರ್ತರನ್ನು ಆಯ್ಕೆ ಮಾಡುವ ಮೂಲಕ ಬಿಜೆಪಿ ಹೈಕಮಾಂಡ್ ಬಿಜೆಪಿಯ ರಾಜ್ಯ ಮುಖಂಡರಿಗೆ ಪ್ರಬಲ ಸಂದೇಶ ರವಾನಿಸಿದೆ.

ಬೆಂಗಳೂರು: ರಾಜ್ಯ ಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಚ್ಚರಿಯ ಆಯ್ಕೆ ಮಾಡುವ ಮೂಲಕ ಬಿಜೆಪಿ ನಾಯಕರಿಗೆ ಶಾಕ್ ನೀಡಿದೆ.ಪಕ್ಷ ನಿಷ್ಠ ಕಾರ್ಯಕರ್ತರನ್ನು ಆಯ್ಕೆ ಮಾಡುವ ಮೂಲಕ ಬಿಜೆಪಿ ಹೈಕಮಾಂಡ್ ಬಿಜೆಪಿಯ ರಾಜ್ಯ ಮುಖಂಡರಿಗೆ ಪ್ರಬಲ ಸಂದೇಶ ರವಾನಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರದ ನಾಯಕರು ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯಸಭಾ ಟಿಕೆಟ್ ಕೊಡುವ ಮೂಲಕ ಕಾರ್ಯಕರ್ತರಿಗೆ ಉತ್ತಮ ಕೊಡುಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಕೋರ್ ಕಮಿಟಿಸಭೆಯಲಿ ಬೇರೆ ಹೆಸರು ಚರ್ಚೆ ಮಾಡಲಾಗಿತ್ತು ಅದರೂ ಬಿಜೆಪಿ ವರಿಷ್ಠರು ಸಾಮಾನ್ಯ ಕಾರ್ಯಕರ್ತರಿಗೆ ಮಣೆಹಾಕಿದ್ದಾರೆ ಎಂದರು.
ಪಕ್ಷದ ನಾಯಕರ ಈ ನಿರ್ಧಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಧನ್ಯವಾದ ಸಲ್ಲಿಸುವುದಾಗಿಯೂ ಅವರು ಹೇಳಿದರು. ಬಿಜೆಪಿಯಿಂದ ಆಯ್ಕೆಯಾಗಿರುವ ಇಬ್ಬರು ಅಭ್ಯರ್ಥಿಗಳು ರಾಜ್ಯಸಭೆಯಲ್ಲಿ ಒಳ್ಳೆಯ ಕೆಲಸ ಮಾಡಿ ರಾಜ್ಯಕ್ಕೆ ಪಕ್ಷಕ್ಕೆ ಕೀರ್ತಿ ತಲಿದ್ದಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


