ರಾಜಕೀಯ

ವಿಧಾನ ಪರಿಷತ್ ಚುನಾವಣೆ: ಬಿ.ಕೆ. ಹರಿಪ್ರಸಾದ್, ನಸೀರ್ ಅಹ್ಮದ್‌ಗೆ ಕಾಂಗ್ರೆಸ್ ಟಿಕೆಟ್

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಬಿ.ಕೆ.ಹರಿಪ್ರಸಾದ್ ಹಾಗೂ ನಸೀರ್ ಅಹ್ಮದ್‌ ಅವರ ಹೆಸರನ್ನು ಎಐಸಿಸಿ ಅಂತಿಮಗೊಳಿಸಿದೆ.

ವಿಧಾನ ಪರಿಷತ್ ಚುನಾವಣೆ: ಬಿ.ಕೆ. ಹರಿಪ್ರಸಾದ್, ನಸೀರ್ ಅಹ್ಮದ್‌ಗೆ ಕಾಂಗ್ರೆಸ್ ಟಿಕೆಟ್
ಬಿ.ಕೆ. ಹರಿಪ್ರಸಾದ್ ನಸೀರ್ ಅಹ್ಮದ್
Published On :

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಬಿ.ಕೆ.ಹರಿಪ್ರಸಾದ್ ಹಾಗೂ ನಸೀರ್ ಅಹ್ಮದ್‌ ಅವರ ಹೆಸರನ್ನು ಎಐಸಿಸಿ ಅಂತಿಮಗೊಳಿಸಿದೆ.

ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅವರು ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಇದೇ ತಿಂಗಳ 29ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ನಿಂದ ಹಲವು ನಾಯಕರು ಟಿಕೆಟ್‌ಗಾಗಿ ಪ್ರಯತ್ನಿಸಿದ್ದರು. ನಿನ್ನೆ ಕಾಂಗ್ರೆಸ್ ರಾಜ್ಯ ನಾಯಕರು ಸಭೆ ನಡೆಸಿ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್‌ಗೆ ಕಳುಹಿಸಿದ್ದರು.

ಒಟ್ಟು 7 ಸ್ಥಾನಗಳಲ್ಲಿ ಬಿಜೆಪಿಗೆ 4 ಕಾಂಗ್ರೆಸ್ ಗೆ 2ಹಾಗೂ ಜೆಡಿಎಸ್ ಪಕ್ಷಕ್ಕೆ 1 ಸ್ಥಾನಕ್ಕೆ ಸ್ಪರ್ಧೆ ಇರಲಿದೆ. 

Story image

ಗುರುವಾರ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೇ ದಿನ ಆಗಿದ್ದು ಇಬ್ಬರೂ ಅಭ್ಯರ್ಥಿಗಳು ನಾಳೆಯೇ ನಾಮಪತ್ರ ಸಲ್ಲಿಕೆ ಮಾಡಬೇಕಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.