ರಾಮನಗರ, ತುಮಕೂರಿಗೆ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ: ಸಿಎಂ ಆಪ್ತರಿಗೆ ಗೇಟ್ ಪಾಸ್
ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ನೂತನ ಬಿಜೆಪಿ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ನೂತನ ಬಿಜೆಪಿ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆಪ್ತರಾಗಿದ್ದ ರುದ್ರೇಶ್ ಅವರನ್ನು ಎತ್ತಂಗಡಿ ಮಾಡಿ ರಾಮನಗರಕ್ಕೆ ಹೊಸ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿ.ವೈ. ವಿಜಯೇಂದ್ರ ಅವರಿಗೆ ಆಪ್ತರಾಗಿದ್ದ ರುದ್ರೇಶ್ ಅವರನ್ನು ರಾಮನಗರದ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ಮಾಡಲಾಗಿತ್ತು.
ರುದ್ರೇಶ್ ಬದಲಾಗಿ ಹುಲುವಾಡಿ ದೇವರಾಜ್ ಅವರನ್ನು ರಾಮನಗರ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಇಂದು ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ. ಹಾಗೆಯೇ ತುಮಕೂರು ಜಿಲ್ಲಾಧ್ಯಕ್ಷರಾಗಿ ಮಾಜಿ ಶಾಸಕ ಬಿ. ಸುರೇಶ ಗೌಡ ಅವರನ್ನು ನೇಮಕ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


