ನಿಖಿಲ್ ರಾಜಕೀಯ ಮಂಡ್ಯದಿಂದ ರಾಮನಗರಕ್ಕೆ ಶಿಫ್ಟ್: ಆಹ್ವಾನ ಪತ್ರಿಕೆ ಜೊತೆ ಜನರಿಗೆ ಎಚ್ ಡಿಕೆ ಗಿಫ್ಟ್!
ಸ್ಯಾಂಡಲ್ ವುಡ್ ಯುವರಾಜ ಹಾಗೂ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ ಸ್ವಾಮಿ ವಿವಾಹದ ಮೂಲಕ ರಾಮನಗರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭದ್ರ ಬುನಾದಿ ಹಾಕುತ್ತಿದ್ದಾರೆ.

ಬೆಂಗಳೂರು: ಸ್ಯಾಂಡಲ್ ವುಡ್ ಯುವರಾಜ ಹಾಗೂ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ ಸ್ವಾಮಿ ವಿವಾಹದ ಮೂಲಕ ರಾಮನಗರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭದ್ರ ಬುನಾದಿ ಹಾಕುತ್ತಿದ್ದಾರೆ.
ನಿಖಿಲ್ ಕುಮಾರಸ್ವಾಮಿ ವಿವಾಹದ ಹೆಸರಲ್ಲಿ ಜಿಲ್ಲೆಯ ಜನರನ್ನು ಭಾವನಾತ್ಮಕವಾಗಿ ಸೆಳೆಯುವ ಪ್ರಯತ್ನಕ್ಕೆ ಮುಂದಾಗಿರುವ ಮಾಜಿ ಸಿಎಂ, ಈಗಾಗಲೇ ಮದುವೆ ಆಮಂತ್ರಣ ಪತ್ರಿಕೆ ಜೊತೆಗೆ ಕ್ಷೇತ್ರದ ಜನರಿಗೆ ಸುದೀರ್ಘ ಪತ್ರವನ್ನು ಬರೆದಿದ್ದಾರೆ. ಈ ಪತ್ರದಲ್ಲಿ ರಾಮನಗರದಲ್ಲೇ ಯಾಕೆ ಮದುವೆ ಮಾಡುತ್ತಿರುವ ಬಗ್ಗೆ ವಿವರಣೆ ನೀಡಿದ್ದಾರೆ.
ಈಗ ಇದಕ್ಕೆ ಪುಷ್ಠಿ ನೀಡುವಂತೆ ಕ್ಷೇತ್ರದ ಜನರಿಗೆ ವಿವಾಹ ಆಮಂತ್ರಣ ನೀಡಲು ತಯಾರಿ ನಡೆಸಿರುವ ಅವರು, ಲಗ್ನ ಪತ್ರಿಕೆ ಜೊತೆ ಮತದಾರರಿಗೆ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದ್ದಾರೆ. ತಮ್ಮ ಕ್ಷೇತ್ರವಾದ ಚನ್ನಪಟ್ಟಣ ಹಾಗೂ ಪತ್ನಿ ಅನಿತಾ ಅವರ ಕ್ಷೇತ್ರವಾದ ರಾಮನಗರ ಮತದಾರರಿಗೆ ಈ ಉಡುಗೊರೆ ನೀಡಲು ಅವರು ನಿರ್ಧರಿಸಿದ್ದಾರೆ.
ರಾಮನಗರದಲ್ಲಿ ಸುಮಾರು 68 ಸಾವಿರ ಕುಟುಂಬ ಹಾಗೂ ಚನ್ನಪಟ್ಟಣದ ಸುಮಾರು 72 ಸಾವಿರ ಕುಟುಂಬಗಳಿಗೆ ಆಮಂತ್ರಣ ಪತ್ರಿಕೆ ಜೊತೆ ಸಂಪ್ರದಾಯದಂತೆ ಗಂಡಸರಿಗೆ ಪಂಚೆ, ಹೆಂಗಸರಿಗೆ ರೇಷ್ಮೆ ಸೀರೆ ನೀಡಲು ಅವರು ಮುಂದಾಗಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಲೋಕಸಭಾ ಚುನಾವಣೆ ಹೀನಾಯ ಸೋಲಿನ ಬಳಿಕ ಪಕ್ಷ ಸಂಘಟನೆಗೆ ಮುಂದಾಗಿರುವ ಜೆಡಿಎಸ್ ನಾಯಕರು ಕುಮಾರಸ್ವಾಮಿಗೆ ರಾಜಕೀಯ ಕರ್ಮಭೂಮಿಯಾಗಿರುವ ರಾಮನಗರದಲ್ಲಿ ತಮ್ಮ ಅಭಿಮಾನಿಗಳ ಸಮ್ಮುಖದಲ್ಲಿ ಮಗನ ಮದುವೆ ಸಿದ್ಧತೆ ನಡೆಸಿದ್ದು, ಈ ಮೂಲಕ ಮತ್ತೆ ಜೆಡಿಎಸ್ ಪರ್ವ ಆರಂಭಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


