ರಾಜಕೀಯ

ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿರುವ ಕಾಂಗ್ರೆಸ್, ಜೆಡಿಎಸ್ ಶಾಸಕರು -ಬಾಬುರಾವ್ ಚಿಂಚನ ಸೂರ್

ಬಿಜೆಪಿ ಸೇರಲು ಕಾಂಗ್ರೆಸ್ - ಜೆಡಿಎಸ್ ಶಾಸಕರು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಮಾಜಿ ಸಚಿವ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನ ಸೂರ್ ಹೇಳಿದ್ದಾರೆ

ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿರುವ ಕಾಂಗ್ರೆಸ್, ಜೆಡಿಎಸ್ ಶಾಸಕರು -ಬಾಬುರಾವ್ ಚಿಂಚನ ಸೂರ್
ಬಾಬುರಾವ್ ಚಿಂಚನಸೂರ್
Published On :

ಕಲಬುರಗಿ: ಬಿಜೆಪಿ ಸೇರಲು ಕಾಂಗ್ರೆಸ್ - ಜೆಡಿಎಸ್ ಶಾಸಕರು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಮಾಜಿ ಸಚಿವ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನ ಸೂರ್ ಹೇಳಿದ್ದಾರೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ಬಹುತೇಕವಾಗಿ ಖಾಲಿಯಾಗಲಿದೆ ಎಂದರು.

ಡಿಕೆ ಶಿವಕುಮಾರ್ , ಜಿ. ಪರಮೇಶ್ವರ್ ಸೇರಿದಂತೆ ಅನೇಕ ಮುಖಂಡರು ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡುತ್ತಿಲ್ಲ. ಮುಂಬರುವ ದಿನಗಳಲ್ಲಿ ಸಿದ್ದರಾಮಯ್ಯ, ತನ್ನ ದಾರಿಯನ್ನು ನೋಡಿಕೊಳ್ಳಲಿದ್ದಾರೆ. ಮುಂದೆ 20 ವರ್ಷವಾದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಅವರು ಭವಿಷ್ಯ ನುಡಿದರು.

ಬಜೆಟ್ ನಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ನೀಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಚಿಂಚನ ಸೂರ್  ಧನ್ಯವಾದ ತಿಳಿಸಿದರು. 

ಕೋಲಿ ಸಮುದಾಯಕವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಸಂಬಂಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮುಖ್ಯಮಂತ್ರಿ ನೇತೃತ್ವದಲ್ಲಿ ನಿಯೋಗವೊಂದನ್ನು ನವದೆಹಲಿಗೆ ಕೊಂಡೊಯ್ಯಲಾಗುವುದು ಎಂದು ಚಿಂಚನ ಸೂರ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.