ರಾಜಕೀಯ

ನಾನು ಬಿಜೆಪಿ ಸೇರುತ್ತೇನೆ ಎನ್ನುವುದು ಮೂರ್ಖತನದ ಹೇಳಿಕೆ: ಸಿದ್ದರಾಮಯ್ಯ

ತಾವು ಬಿಜೆಪಿ ಸೇರುತ್ತೇವೆ ಎಂದು ಕೇಳಿ ಬರುತ್ತಿರುವ ಮಾತಿಗೆ ಕೊನೆಗೂ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಬಿಜೆಪಿ ಸೇರುತ್ತೇನೆ ಎನ್ನುವುದು ಮೂರ್ಖತನದ ಹೇಳಿಕೆ: ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :

ಬೆಂಗಳೂರು: ತಾವು ಬಿಜೆಪಿ ಸೇರುತ್ತೇವೆ ಎಂದು ಕೇಳಿ ಬರುತ್ತಿರುವ ಮಾತಿಗೆ ಕೊನೆಗೂ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ಮೂರ್ಖತನದ ಹೇಳಿಕೆ. ಕಾನೂನು ವಿದ್ಯಾರ್ಥಿಯಾಗಿ 1972ರಲ್ಲಿ ರಾಜಕೀಯ ಪ್ರವೇಶ ಮಾಡಿದಾಗಿಂದ ಸಾಮಾಜಿಕ ನ್ಯಾಯ, ಸಮಾನತೆ, ಮೀಸಲಾತಿ ವ್ಯವಸ್ಥೆ ಪರ ಹೋರಾಡುತ್ತಾ ಬಂದಿದ್ದೇನೆ, ಬಿಜೆಪಿ ಈ ಎಲ್ಲಾ ತತ್ವಗಳಿಗೂ ವಿರುದ್ಧವಾಗಿದೆ. ಹೀಗಿರುವಾಗ ಬಿಜೆಪಿ ಸೇರಲು ಸಾಧ್ಯವೇ? ಇದೊಂದು ಮೂರ್ಖತನದ ಪ್ರಚಾರ ಎಂದಿದ್ದಾರೆ.

ಯಾರೇ ಆಗಲಿ ಒಂದು ಸಿದ್ಧಾಂತಕ್ಕೆ ಬದ್ಧವಾಗಿದ್ದಾಗ ಪದೇ ಪದೇ ಪಕ್ಷ ಬದಲಿಸುವಂತಹ ಸನ್ನಿವೇಶವೇ ಉದ್ಭವಿಸುವುದಿಲ್ಲ. ಅವಕಾಶವಾದಿ ರಾಜಕಾರಣಿಗಳು ಮಾತ್ರ ಅಧಿಕಾರ ಹುಡುಕಿಕೊಂಡು ಹೋಗುತ್ತಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಜನರಿಂದ ನೇರವಾಗಿ ಸಿಗಬೇಕೇ ಹೊರತು ವಾಮಮಾರ್ಗದ ಮೂಲಕ ಅಧಿಕಾರ ಪಡೆಯಲು ಹಪಹಪಿಸಬಾರದು ಎಂದು ಕೂಡ ವಿವರಿಸಿದ್ದಾರೆ.

ಬಾದಾಮಿ ಕ್ಷೇತ್ರದಲ್ಲಿ ರೂ.500 ಕೋಟಿ ವೆಚ್ಚದ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಬೇಡಿಕೆ ಇಟ್ಟಿದ್ದೀನಿ. ಯೋಜನೆ ಇನ್ನೂ ಅನುಮೋದನೆಗೊಂಡಿಲ್ಲ, ಆಗಲೇ ಬಿಜೆಪಿಯ ಕೆಲವು ನಾಯಕರು ಬಾದಾಮಿಗೆ ನಾವು ರೂ.650 ಕೋಟಿ ಕೊಟ್ಟಿದ್ದೀವಿ ಅಂತ ಪ್ರಚಾರ ಶುರು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಹೋಳಿ ಹಬ್ಬಕ್ಕೆ ಶುಭಾಶಯ
ರಾಜ್ಯದ ಸಮಸ್ತ ಬಂಧುಗಳಿಗೆ ಹೋಳಿ ಹಬ್ಬದ ಶುಭಾಶಯಗಳು. ಕೊರೋನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಪರಿಸರ ನೈರ್ಮಲ್ಯದ ಬಗ್ಗೆ ಕಾಳಜಿ ಇರಲಿ ಎಂದು ಟ್ವೀಟ್ ಮೂಲಕ ಶುಭಾಶಯ ಸಲ್ಲಿಸುವ ಜೊತೆಗೆ ಎಚ್ಚರಿಕೆಯ ಸಂದೇಶವನ್ನು ರವಾನೆ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.