ರಾಜಕೀಯ

ರಾಹುಲ್ ಪಕ್ಷವನ್ನು ಮುನ್ನಡೆಸುವ ಸಮಯವಿದು- ದಿನೇಶ್ ಗುಂಡೂರಾವ್ 

ಮಧ್ಯಪ್ರದೇಶ ಕಾಂಗ್ರೆಸ್ ನಲ್ಲಿ ಬಂಡಾಯದ ಬೆನ್ನಲ್ಲೇ ರಾಹುಲ್ ಗಾಂಧಿ ಪಕ್ಷವನ್ನು ಮುನ್ನಡೆಸುವ ಹಾಗೂ ಉನ್ನತ ಹಂತದಲ್ಲಿ ತೀವ್ರ ಬದಲಾವಣೆ ಮಾಡಬೇಕಾದ ಸಮಯ ಇದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ರಾಹುಲ್ ಪಕ್ಷವನ್ನು ಮುನ್ನಡೆಸುವ ಸಮಯವಿದು- ದಿನೇಶ್ ಗುಂಡೂರಾವ್ 
ದಿನೇಶ್ ಗುಂಡೂರಾವ್, ರಾಹುಲ್ ಗಾಂಧಿ
Published On :

ಬೆಂಗಳೂರು: ಮಧ್ಯಪ್ರದೇಶ ಕಾಂಗ್ರೆಸ್ ನಲ್ಲಿ ಬಂಡಾಯದ ಬೆನ್ನಲ್ಲೇ ರಾಹುಲ್ ಗಾಂಧಿ ಪಕ್ಷವನ್ನು ಮುನ್ನಡೆಸುವ ಹಾಗೂ ಉನ್ನತ ಹಂತದಲ್ಲಿ ತೀವ್ರ ಬದಲಾವಣೆ ಮಾಡಬೇಕಾದ ಸಮಯ ಇದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ಏನು ನಡೆದರೂ ಒಂದು ವಿಚಾರವಂತೂ ಸ್ಪಷ್ಟವಾಗಿದೆ. ಇದು ಪಕ್ಷವನ್ನು ರಾಹುಲ್ ಗಾಂಧಿ ಮುನ್ನಡೆಸುವ ಸಮಯವಾಗಿದೆ. ಉನ್ನತ ಹಂತದಲ್ಲಿ ಸಾಕಷ್ಟು ಬದಲಾವಣೆ ಮಾಡಬೇಕಾಗಿದೆ. ನಾವು ಇನ್ನು ಮುಂದೆ ಈ ರೀತಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ. 

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ರಾಹುಲ್ ಗಾಂಧಿ ಅಗತ್ಯವಾಗಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ಪ್ರಬಲ ಯುವ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಪಕ್ಷ ತೊರೆದ ಬೆನ್ನಲ್ಲೇ ಕಮಲ್ ನಾಥ್ ನೇತೃತ್ವದ ಮಧ್ಯಪ್ರದೇಶ ಸರ್ಕಾರ ಅಲುಗಾಡುತ್ತಿರುವಂತೆ ಸಿಂಧಿಯಾ ಬಿಜೆಪಿಯೊಂದಿಗೆ ಕೈ ಜೋಡಿಸುವ ಸಂದೇಶ ನೀಡಿರುವ ಮಧ್ಯೆ ದಿನೇಶ್ ಗುಂಡೂರಾವ್ ಈ ರೀತಿಯ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.