ಭ್ರಷ್ಟಾಚಾರದಿಂದ ಹಣ ಸಂಪಾದಿಸಿದ್ದೇನೆ ಅಂತ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ: ಕುಮಾರಸ್ವಾಮಿ ಸವಾಲು
ಪ್ರತಿ ನಾಗರಿಕನಿಗೂ ರಕ್ಷಣೆ ಕೊಡುವ ಸಂವಿಧಾನ ನಮಗೆ ದೊರೆತಿರುವ ಕಾರಣದಿಂದಲೇ 70 ವರ್ಷಗಳಲ್ಲಿ ಸಾಕಷ್ಟು ಸಾಧನೆ ಮಾಡಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೇವಲ ಟೀಕೆಗಾಗಿ, ಟೀಕೆ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಪ್ರತಿ ನಾಗರಿಕನಿಗೂ ರಕ್ಷಣೆ ಕೊಡುವ ಸಂವಿಧಾನ ನಮಗೆ ದೊರೆತಿರುವ ಕಾರಣದಿಂದಲೇ 70 ವರ್ಷಗಳಲ್ಲಿ ಸಾಕಷ್ಟು ಸಾಧನೆ ಮಾಡಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೇವಲ ಟೀಕೆಗಾಗಿ, ಟೀಕೆ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಸಂವಿಧಾನದ ಮೇಲೆ ನಡೆದ ವಿಶೇಷ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೆಲವರ ಪ್ರತಿಕ್ರಿಯೆ ನೋಡಿದರೆ ಅಂಬೇಡ್ಕರ್ ಅವರಿಗೆ ಗೌರವ ನೀಡುತ್ತಿದ್ದೇವೆಯೇ?. ಅಂಬೇಡ್ಕರ್ ಕೊಟ್ಟ ಮಹಾನ್ ಗ್ರಂಥವನ್ನು ಅನುಷ್ಠಾನಕ್ಕೆ ತರುವಲ್ಲಿ ಆಳುವವರಾದ ನಾವು ಎಡವಿದ್ದು, ಸಂವಿಧಾನಕ್ಕೆ ಗೌರವ ಸಲ್ಲಿಸುವಂತೆ ನಾವು ನಡೆದುಕೊಂಡಿದ್ದೇವೆಯೇ? ಎಂಬ ಅನುಮಾನ ಕಾಡುತ್ತಿದೆ ಎಂದರು.
ಸದನದಲ್ಲಿರುವ ಹಲವು ಸದಸ್ಯರು ಅಂಬೇಡ್ಕರ್ ಅವರ ಬಗ್ಗೆ ಈಗಾಗಲೇ ಸಾಕಷ್ಟು ಮಾತನಾಡಿದ್ದಾರೆ. ಅಂಬೇಡ್ಕರ್ ಯಾವಗಲೂ ಚಿರ ಸ್ಮರಣೀಯರು. ಸಾಮಾಜಿಕ, ಆರ್ಥಿಕ, ಸಮಾನತೆ ಬಗ್ಗೆ ಈಗಾಗಲೇ ಚರ್ಚೆಯಾಗಿದೆ. ಅತ್ಯಂತ ಪ್ರಬುದ್ಧವಾದ, ಎಲ್ಲಾ ಜನರಿಗೂ ರಕ್ಷಣೆ ನೀಡುವಂತ ಸಂವಿಧಾನವನ್ನು ಅಂಬೇಡ್ಕರ್ ಅವರ ತಂಡ ನೀಡಿದೆ.
ಆದರೆ, ಇತ್ತೀಚೆಗೆ ನನಗೆ ಕೆಲವೊಂದು ಅನುಮಾನಗಳು ಕಾಡ ತೊಡಗಿವೆ. ಅಂಬೇಡ್ಕರ್ ಅವರ ಸಂವಿಧಾನವನ್ನು ನಾವು ಕೇವಲ ಶೋ ಪೀಸ್ ಆಗಿ ಇಟ್ಟಿದ್ದೇವೆಯೋ ಅಥವಾ ಮೂಲಭೂತ ಹಕ್ಕುಗಳ ವಿಚಾರದಲ್ಲಿ ನಾವು ಎಡವಿದ್ದೇವೆಯೋ ಎಂಬ ಪ್ರಶ್ನೆ ಮೂಡಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


