ಜೆಡಿಎಸ್ ಉಚ್ಛಾಟಿತ ಪರಿಷತ್ ಸದಸ್ಯ ಪುಟ್ಟಣ್ಣ ಬಿಜೆಪಿಗೆ ಸೇರ್ಪಡೆ
ಜೆಡಿಎಸ್ ಪಕ್ಷದ ಉಚ್ಚಾಟಿತ ಪರಿಷತ್ ಸದಸ್ಯ ಪುಟ್ಟಣ್ಣ ಅವರು ಮಂಗಳವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಬೆಂಗಳೂರು: ಜೆಡಿಎಸ್ ಪಕ್ಷದ ಉಚ್ಚಾಟಿತ ಪರಿಷತ್ ಸದಸ್ಯ ಪುಟ್ಟಣ್ಣ ಅವರು ಮಂಗಳವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಪುಟ್ಟಣ್ಣ ಅವಕನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪುಟ್ಟಣ್ಣ ಅವರು ಕಣಕ್ಕೆ ಇಳಿಯಲಿದ್ದಾರೆ. ಈ ಹಿನ್ನೆಲೆಯಲ್ಲಿ ನಿನ್ನೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆಂದು ತಿಳಿದುಬಂದಿದೆ. ಪುಟ್ಟಣ್ಣ ಅವರು ಬಿಜೆಪಿಗೆ ಸೇರ್ಪಡೆಗೊಂಡ ಸಂದರ್ಧದಲ್ಲಿ ಸ್ಥಳದಲ್ಲಿ ಬಿಜೆಪಿ ನಾಯಕ ಅರವಿಂದ ಲಿಂಬಾವಳಿ ಕೂಡ ಇದ್ದರು.
ಪಕ್ಷ ವಿರೋಧ ಚಟುವಟಿಕೆಗಳ ಹಿನ್ನೆಲೆಯಲ್ಲಿ ಕಳೆದ ವರ್ಷ ಜೆಡಿಎಸ್ ಪುಟ್ಟಣ್ಣ ಅವರನ್ನು ಪಕ್ಷದಿಂದ ಉಚ್ಛಾಟನೆಗೊಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


