'ಕಾಂಗ್ರೆಸ್ಸಿಗರಿಗೆ ಆಡಳಿತ ನಡೆಸಿ ಸಾಕಾಗೋಗಿದೆ, ನಿಮ್ಮ ಸರದಿ, ನೀವು ಮುಂದುವರಿಸಿ'
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರ ಕೊನೆ ಚುನಾವಣೆ ಪ್ರಸಂಗದ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ ನಡೆಯಿತು.

ಬೆಂಗಳೂರು; ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರ ಕೊನೆ ಚುನಾವಣೆ ಪ್ರಸಂಗದ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ ನಡೆಯಿತು.
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡುತ್ತಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಚಿವ ಕೆ.ಎಸ್.ಈಶ್ವರಪ್ಪರನ್ನು ಉದ್ದೇಶಿಸಿ ನನಗೆ ಸಾಕಾಗಿದೆ. ಇನ್ನು ಚುನಾವಣೆಗೆ ನಿಲ್ಲಲ್ಲ. ನೀವು ಮುಂದುವರಿಸಿ ಎಂದು ಹೇಳಿದರು.
ಆಗ ಸಚಿವ ಈಶ್ವರಪ್ಪ, ಕೊನೆ ಚುನಾವಣೆ ಅಂಥ ನೀವು ಹೇಳುವುದು ಬೇಡ. ಹಾಗೇ ಹೇಳಿದರೂ ಮತ್ತೆ ಮತ್ತೆ ಚುನಾವಣೆಗೆ ನಿಲ್ಲುತ್ತೀರಾ ಎಂದು ಚುನಾವಣಾ ನಿವೃತ್ತಿ ಘೋಷಣೆ ಮಾಡಿದರೂ ಮತ್ತೆ ಮತ್ತೆ ಚುನಾವಣೆಯಲ್ಲಿ ನಿಲ್ಲುತ್ತಿರುವ ಬಗ್ಗೆ ಕಿಚಾಯಿಸಿದರು.
ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ನಾನು ಚುನಾವಣೆಗೆ ನಿಲ್ಲಬಾರದು ಎಂದುಕೊಳ್ಳುತ್ತೇನೆ. ಆದರೆ, ಅಷ್ಟೊತ್ತಿಗೆ ಯಾವುದಾದರೂ ಒಂದು ರಾಜಕೀಯ ಬೆಳವಣಿಗೆ ನಡೆಯುತ್ತೆ. ಆಗ ಹೈಕಮಾಂಡ್ ಒತ್ತಡ ಮೇರೆಗೆ ನಿಲ್ಲಲೇಬೇಕಾಗುತ್ತದೆ ಎಂದರು.
ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ನೀಡಲಾದ ಲ್ಯಾಪ್‌ಟಾಪ್ ಖರೀದಿಯಲ್ಲಿ ಅಕ್ರಮ ಆಗಿದೆ. ಈ ಬಗ್ಗೆ ತನಿಖೆ ಆಗಬೇಕು ಎಂದರು ಸಿದ್ದರಾಮಯ್ಯ. ಇದಕ್ಕೆ ದನಿಗೂಡಿಸಿದ ಈಶ್ವರಪ್ಪ, ಈ ತನಿಖೆಗೆ ನಮ್ಮ ಆಕ್ಷೇಪ ಇಲ್ಲ. ಇಲ್ಲವಾದರೆ ಕೇವಲ ಚಟಕ್ಕೋಸ್ಕರ ಭಾಷಣ ಮಾಡಿದಂತಾಗುತ್ತದೆ. ಹೀಗಾಗಿ ನಾನು ವೈಯ್ಯಕ್ತಿಕವಾಗಿ ಲ್ಯಾಪ್‌ಟಾಪ್ ಖರೀದಿ ಅಕ್ರಮದ ಬಗ್ಗೆ ತನಿಖೆ ಆಗಬೇಕು ಎಂದು ಒತ್ತಾಯಿಸುತ್ತೇನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


