ವಿಧಾನಸಭೆ ಡೆಪ್ಯುಟಿ ಸ್ಫೀಕರ್ ಸ್ಥಾನಕ್ಕೆ ಶಾಸಕ ಆನಂದ ಮಾಮನಿ ಅವಿರೋಧ ಆಯ್ಕೆ
ಇಂದು ವಿಧಾನಸಭೆ ಅಧಿವೇಶನ ಮುಕ್ತಾಯಗೊಳ್ಲಲಿದ್ದು ಇದಕ್ಕೆ ಮುನ್ನ ವಿಧಾನಸಭೆ ಉಪಾದ್ಯಕ್ಷ ಸ್ಥಾನದ ಆಯ್ಕೆ ನಡೆಯುತ್ತಿದೆ, ವಿಧಾನಸಭೆ ಉಪಾಧ್ಯಕ್ಷರಾಗಿದ್ದ ಕೃಷ್ಣಾ ರೆಡ್ಡಿ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಶಾನಕ ಆನಂದ ಮಾಮನಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಕಟಿಸಿದ್ದಾರೆ.

ಬೆಂಗಳೂರು: ಜೆಡಿಎಸ್ ನ ಕೃಷ್ಣಾ ರೆಡ್ಡಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಆನಂದ ಮಾಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹುದ್ದೆಗೆ ಬಿಜೆಪಿಯ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಅರಗ ಜ್ಞಾನೇಂದ್ರ ಅವರ ಹೆಸರು ಕೇಳಿ ಬಂದಿತ್ತು. ಆದರೆ ಕೊನೆ ಸಮಯದಲ್ಲಿ ಆನಂದ ಮಾಮನಿ ಅವರಿಗೆ ಈ ಹುದ್ದೆ ಒಲಿದು ಬಂತು.
ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕರಾದ ಆನಂದ ಮಾಮನಿ 3ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. 1997-98ರಲ್ಲಿ ಇವರ ತಂದೆ ಚಂದ್ರಶೇಖರ ಮಾಮನಿ ಅವರು ಸಹ ವಿಧಾನಸಭೆಯ ಉಪಸಭಾಧ್ಯಕ್ಷರಾಗಿದ್ದರು. ಇದೀಗ ಅವರ ಪುತ್ರನಿಗೂ ಸಹ ಇದೇ ಹುದ್ದೆ ಒಲಿದು ಬಂದಿದೆ
ಆನಂದ ಮಾಮನಿ ಅವರನ್ನು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಪ್ರಕಟಿಸಿದರು. ಸಭಾನಾಯಕರೂ ಆದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತಿತರರು ಆನಂದ ಮಾಮನಿ ಅವರನ್ನು ಅಭಿನಂದಿಸಿದರು.
ಆನಂದ ಮಾಮನಿ ಅವರು ಉಪಸಭಾಧ್ಯಕ್ಷರಾಗಿ ಆಯ್ಕೆಯಾಗಿರುವುದನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿ ಹೊಳಿ ಅಭಿನಂದಿಸಿದ್ದಾರೆ.ತಮ್ಮ ಜಿಲ್ಲೆಯವರೇ ಆದ ಮಾಮನಿ ಅವರಿಗೆ ಈ ಹುದ್ದೆ ದೊರೆತರಿವುದು ತಮಗೆ ಅತೀವ ಸಂತಸ ತಂದಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


