ರಾಜಕೀಯಕ್ಕಾಗಿ ಕೊರೊನಾ ಟೀಕೆ ಆಗಬಾರದು: ಮಾಜಿ ಸಿಎಂ ಕುಮಾರಸ್ವಾಮಿ
ಕೊರೋನಾ ವಿರುದ್ಧದ ಹೋರಾಟ ತಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಕೇವಲ ರಾಜಕೀಯ ಟೀಕೆಗೆ ಮಾತ್ರ ಸರ್ವಪಕ್ಷ ಸಭೆ ಆಗಬಾರದು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಕೊರೋನಾ ವಿರುದ್ಧದ ಹೋರಾಟ ತಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಕೇವಲ ರಾಜಕೀಯ ಟೀಕೆಗೆ ಮಾತ್ರ ಸರ್ವಪಕ್ಷ ಸಭೆ ಆಗಬಾರದು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿಯವರು 21 ದಿನಗಳ ಲಾಕ್‌ಡೌನ್ ಘೋಷಿಸಿರುವುದು ಒಂದು ಪರಿಹಾರ ಮಾತ್ರ. ಖಾಸಗಿ ಕಟ್ಟಡಗಳಲ್ಲಿ ಸರ್ಕಾರಿ ಕಟ್ಟಡಗಳಲ್ಲಿ ಕ್ವಾರಟೈಂನ್ ನಿರ್ಮಿಸಬೇಕೆಂದು ಜೆಡಿಎಸ್ ಆರಂಭದಲ್ಲಿಯೇ ಸಲಹೆ ನೀಡಿತ್ತಾದರೂ ಸರ್ಕಾರ ಆರಂಭದಲ್ಲಿ ಉಡಾಫೆ ಮಾಡಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಆಸ್ಪತ್ರೆಗಳಲ್ಲಿ ಪರೀಕ್ಷೆಗೆ ಅಗತ್ಯ ವೈದ್ಯಕೀಯ ಉಪಕರಣಗಳೇ ಇಲ್ಲ ಅಂದ ಮೇಲೆ ವೈದ್ಯಕೀಯ ಪರೀಕ್ಷೆ ಮಾಡುವುದಾದರೂ ಹೇಗೆ? . ಚೀನಾದಿಂದ ಒಂದು ಲಕ್ಷ ಕಿಟ್ ತರಿಸುವುದಾಗಿ ಸರ್ಕಾರ ಹೇಳಿದಂತೆ ನಡೆದುಕೊಂಡಿಲ್ಲ ಎಂದು ಹೆಚ್.ಡಿ. ಕುಮಾರಸ್ವಾಮಿ ದೂರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


