ಬಿಜೆಪಿ ನಾಯಕರಿಗೆ ಟ್ವೀಟ್ ಮೂಲಕ ಪ್ರಿಯಾಂಕ್ ಖರ್ಗೆ ತಿರುಗೇಟು
ಬಿಜೆಪಿ ನಾಯಕರಿಂದ ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭೇಟಿ ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಶರತ್. ಬಿ ಅವರ ವರ್ಗಾವಣೆ ಪ್ರಹಸನ ಕುರಿತು ಬಿಜೆಪಿ ನಾಯಕರಿಗೆ ಅವರದೇ ಧಾಟಿಯಲ್ಲಿ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ

ಕಲಬುರಗಿ: ಬಿಜೆಪಿ ನಾಯಕರಿಂದ ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭೇಟಿ ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಶರತ್. ಬಿ ಅವರ ವರ್ಗಾವಣೆ ಪ್ರಹಸನ ಕುರಿತು ಬಿಜೆಪಿ ನಾಯಕರಿಗೆ ಅವರದೇ ಧಾಟಿಯಲ್ಲಿ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ
ತಮ್ಮನ್ನು ಟ್ವಿಟರ್ ಖರ್ಗೆ ಎಂದು ವ್ಯಂಗ್ಯವಾಡಿದ್ದ ಮಾಜಿ ಶಾಸಕ ಮಾಲಿಕಯ್ಯ ಗುತ್ತೇದಾರ ಹಾಗೂ ಬಿಜೆಪಿ ನಾಯಕರಿಗೆ ಶಾಸಕ ಪ್ರಿಯಾಂಕ್ ಖರ್ಗೆ ಅವರು ಅದೇ ದಾಟಿಯಲ್ಲೇ ತಿರುಗೇಟು ನೀಡಿದ್ದಾರೆ.
ಕಲಬುರಗಿ ಜಿಲ್ಲಾಧಿಕಾರಿ ವರ್ಗಾವಣೆ ನಂತರ ವ್ಯಕ್ತವಾದ ಸಾರ್ವಜನಿಕರ ಆಕ್ರೋಶ ಹಾಗೂ ನಕಾರಾತ್ಮಕ ಪ್ರತಿಕ್ರಿಯೆಗಳ ನಂತರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಮಾಧಾನಪಡಿಸಲು ಬಿಜೆಪಿ ನಾಯಕರು ಬೆಂಗಳೂರಿಗೆ ಧಾವಿಸಿದ್ದಾರೆ ಎಂದಿದ್ದಾರೆ.
ಇನ್ನು, ಜಿಲ್ಲಾಧಿಕಾರಿ ಶರತ್ ಬಿ ಅವರನ್ನು ವರ್ಗಾವಣೆ ಏಕೆ ಮಾಡಲಾಗಿತ್ತು? ಎಂದು ಪ್ರಶ್ನಿಸಿರುವ ಅವರು, ವರ್ಗಾವಣೆಯಲ್ಲಿ ತಮ್ಮದೇನು ಪಾತ್ರವಿಲ್ಲ ಎಂದು ಹೇಳಿಕೊಂಡ ಬಿಜೆಪಿ ನಾಯಕರು ವಿಡಿಯೋ ಬಿಡುಗಡೆ ಮಾಡಿದ್ದು ಯಾಕೆ? ಮುಖ್ಯಮಂತ್ರಿ ಅವರಿಗೆ ತಪ್ಪು ಮಾಹಿತಿ ನೀಡಿದ್ದು ಯಾರು? ಎಂದು ಟ್ವೀಟ್ ಮಾಡಿ ಪ್ರಶ್ನಿಸಿರುವ ಶಾಸಕರು, ಯಾರು ತಮ್ಮನ್ನು ಟ್ವೀಟರ್ ಖರ್ಗೆ ಎಂದು ಕರೆದಿದ್ದರೋ ಅದೇ ಹೆಸರನ್ನೇ ಟ್ವೀಟ್ ಕೊನೆಯಲ್ಲಿ ಪುನಃ ನಮೂದಿಸಿ ಶಾಸಕರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


