ದಾವಣಗೆರೆ ಕೋವಿಡ್ ನಿಯಂತ್ರಣ ಸಭೆ: ಏಕವಚನದಲ್ಲೇ ಬೈದಾಡಿಕೊಂಡ ಸಂಸದ, ಶಾಸಕರು
ಸಂಸದ ಸಿದ್ದೇಶ್ವರ ಹಾಗೂ ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರು ಏಕವಚನದಲ್ಲೇ ವಾಕ್ ಸಮರಕ್ಕೀಳಿದಿದ್ದ ಘಟನೆಯೊಂದು ದಾವಣಗೆರೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ನಡೆದಿದೆ.

ದಾವಣಗೆರೆ: ಸಂಸದ ಸಿದ್ದೇಶ್ವರ ಹಾಗೂ ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರು ಏಕವಚನದಲ್ಲೇ ವಾಕ್ ಸಮರಕ್ಕೀಳಿದಿದ್ದ ಘಟನೆಯೊಂದು ದಾವಣಗೆರೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ನಡೆದಿದೆ.
ಕೋವಿಡ್ ಸೋಂಕಿನ ಬಗ್ಗೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಉಸ್ತುವಾರಿ ಸಚಿವ ಭೈರತಿ ಭಸವರಾಜ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸಮ್ಮುಖದಲ್ಲಿ ಇಬ್ಬರು ರಾಜಕಾರಣಿಗಳ ನಡುವೆ ಮಾತಿನ ಚಕಮಕಿ ಬೆಳೆದಿದೆ.
ಏ ಎನೋ ಮಾತಾಡುತ್ತೀಯಾ ನೀನು ಎಂದ ಸಂಸದರಿಗೆ, ಏ ಕುತುಕೊಳ್ಳೊ ನೀನು, ನಿಂದೇನೋ ಎಂದು ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರು ಏಕವಚನದಲ್ಲೇ ತಿರುಗೇಟು ನೀಡಿದ್ದಾರೆ.
ಮಾಡಾಳು ವಿರುಪಾಕ್ಷಪ್ಪ ಕುಡಿಯುವ ನೀರಿನ ಬಗ್ಗೆ ಮಾತಾಡುತ್ತಿರುವ ವೇಳೆ ಸಂಸದರ ಆಕ್ಷೇಪಣೆಗೆ ಚನ್ನಗಿರಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರು ಏಕವಚನದಲ್ಲಿ ಮಾತನಾಡಿದ್ದಾರೆ.
ನಂತರ ಮಾಡಾಳು ವಿರುಪಾಕ್ಷಪ್ಪ ಅವರ ಮಾತಿಗೆ ಆಕ್ರೋಶಗೊಂಡ ಸಂಸದರು ಕುರ್ಚಿಯಿಂದ ಎದ್ದು ಬಂದಿದ್ದು, ಸ್ವಪಕ್ಷೀಯರೇ ಕೈ ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ಆರಂಭಿಸಿದ್ದಾರೆ.
ತಕ್ಷಣವೇ ಎಸ್ ಪಿ ಹನುಮಂತರಾಯ ಅವರು ಮಧ್ಯ ಪ್ರವೇಶಿಸಿ ಗಲಾಟೆ ತಿಳಿಗೊಳಿಸಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


