ರಾಜಕೀಯ

ಜನ್ಮ ದಿನಕ್ಕೆ ಶುಭಾಶಯ ಕೋರಲು ಆಗಮಿಸದಂತೆ ಡಿಕೆಶಿ ಮನವಿ

ಮೇ 15ರಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ಹುಟ್ಟುಹಬ್ಬ. ಅಂದು ತಾವು ಊರಲ್ಲಿ ಇಲ್ಲದಿರುವುದರಿಂದ ಜನ್ಮದಿನದ ಶುಭಾಶಯ ಕೋರಲು ಯಾರೂ ಬರಬಾರದೆಂದು ಅವರು ಮನವಿ ಮಾಡಿದ್ದಾರೆ.

ಜನ್ಮ ದಿನಕ್ಕೆ ಶುಭಾಶಯ ಕೋರಲು ಆಗಮಿಸದಂತೆ ಡಿಕೆಶಿ ಮನವಿ
ಡಿಕೆ ಶಿವಕುಮಾರ್
Published On :

ಬೆಂಗಳೂರು: ಮೇ 15ರಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ಹುಟ್ಟುಹಬ್ಬ. ಅಂದು ತಾವು  ಊರಲ್ಲಿ ಇಲ್ಲದಿರುವುದರಿಂದ ಜನ್ಮದಿನದ ಶುಭಾಶಯ ಕೋರಲು ಯಾರೂ  ಬರಬಾರದೆಂದು ಅವರು ಮನವಿ ಮಾಡಿದ್ದಾರೆ. 

ಅನಿವಾರ್ಯ ಕಾರಣಗಳಿಂದ ಮೇ 14 ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಇರುವುದಿಲ್ಲ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

 ನಾಯಕರಾಗಲಿ, ಪಕ್ಷದ ಕಾರ್ಯಕರ್ತರಾಗಲಿ, ಅಭಿಮಾನಿ ಬಂಧುಗಳಾಗಲಿ, ಕನಕಪುರ  ಕ್ಷೇತ್ರದವರಾಗಲಿ ಯಾರೂ ಕೂಡ ಸದಾಶಿವನಗರ ನಿವಾಸಕ್ಕಾಗಲಿ, ಪಕ್ಷದ ಕಚೇರಿಗಾಗಲಿ ಬರುವುದು  ಬೇಡ. ಯಾರೂ ಇದನ್ನು ತಪ್ಪಾಗಿ ಭಾವಿಸಬಾರದು ಎಂದು ಶಿವಕುಮಾರ್ ವಿನಂತಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.