ಜಮೀರ್ ಅಹ್ಮದ್ ಖಾನ್ ಇನ್ನೂ ಜಿನ್ನಾ ಮಾನಸಿಕತೆಯಿಂದ ಹೊರ ಬಂದಿಲ್ಲ: ಸಿಟಿ ರವಿ ಕಿಡಿ
ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಇನ್ನೂ ಜಿನ್ನಾ ಮಾನಸಿಕತೆಯಿಂದ ಹೊರ ಬಂದಿಲ್ಲ ಎಂದು ಸಚಿವ ಸಿಟಿ ರವಿ ಕಿಡಿಕಾರಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಇನ್ನೂ ಜಿನ್ನಾ ಮಾನಸಿಕತೆಯಿಂದ ಹೊರ ಬಂದಿಲ್ಲ ಎಂದು ಸಚಿವ ಸಿಟಿ ರವಿ ಕಿಡಿಕಾರಿದ್ದಾರೆ.
ವಕ್ಫ್ ಬೋರ್ಡ್ ಹಣವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಬಾರದು ಎಂಬ ಕಾಂಗ್ರೆಸ್ ಶಾಸಕ ಜಮೀರ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಸಿ ಟಿ ರವಿ ಅವರು, ಇದು ಸಂವಿಧಾನ ವಿರೋಧಿ ಹೇಳಿಕೆಯಾಗಿದೆ. ಯಾವುದೇ ಜಾತಿ ಅಥವಾ ಧರ್ಮದ ವಿಚಾರಕ್ಕೆಸಂಬಂಧಿಸಿದಂತೆ ತಾರತಮ್ಯ ಮಾಡಲು ಸಂವಿಧಾನದಲ್ಲಿ ಅವಕಾಶವಿಲ್ಲ. ಇದು ಜಾತ್ಯತೀತ ನೀತಿಗೆ ವಿರುದ್ಧವಾದದ್ದು. ಕೊರೋನಾ ಸಾಂಕ್ರಾಮಿಕ ಪಿಡುಗಿನ ಈ ಸಂದರ್ಭದಲ್ಲಿ ಜಮೀರ್ ಅಹ್ಮದ್ ಖಾನ್ ಮಾನವೀಯತೆಗೆ ವಿರುದ್ಧವಾಗಿ ಜಾತಿಯನ್ನು ಪ್ರತಿಬಿಂಬಿಸುವ ಹೇಳಿಕೆ ಕೊಟ್ಟಿದ್ದಾರೆ. ಇದು ಜಮೀರ್ ಹೇಳಿಕೆಯೋ, ಕಾಂಗ್ರೆಸ್ ಪಕ್ಷದ ಹೇಳಿಕೆಯೋ ಎಂದು ಸಿಟಿ ರವಿ ಪ್ರಶ್ನಿಸಿದರು.
ಅಂತೆಯೇ ಕಾಂಗ್ರೆಸ್ ನವರು ಯಾರೂ ಇದರ ಬಗ್ಗೆ ಪ್ರತಿಕ್ರಿಯೆ ಕೊಡುತ್ತಿಲ್ಲ. ಮತಾಂಧತೆಯ ಉನ್ಮತ್ತತೆಯಲ್ಲಿ ಜಮೀರ್ ಬಡ ಬಡಾಯಿಸುತ್ತಿದ್ದಾರೆ. ವಕ್ಫ್ ಬೋರ್ಡ್ ಸರ್ಕಾರಕ್ಕಿಂತ ದೊಡ್ಡದಲ್ಲ. ವಕ್ಫ್ ಬೋರ್ಡ್ ಗೆ ಕೊಡುವುದು ಸಾರ್ವಜನಿಕರ ಹಣ. ಅವರು ಜಿನ್ನಾ ಮಾನಸಿಕತೆಯಿಂದ ಇನ್ನೂ ಹೊರ ಬಂದಿಲ್ಲ. ಜಕಾತ್ ಕೊಟ್ಟು ಡೆಪಾಸಿಟ್ ಮಾಡಿರುವ ಹಣ ಅಲ್ಲ. ಜಮೀರ್ ಅಹ್ಮದ್ ಅವರು ಕೊಡುವ ಜಕಾತ್ ಹಣವನ್ನು ನಾವು ಕೇಳುವುದಿಲ್ಲ. ವಕ್ಫ್ ಹಣವನ್ನು ಹೇಗೆ ಖರ್ಚು ಮಾಡಬೇಕು ಎಂದು ಹೇಳುವ ಅಧಿಕಾರ ಜಮೀರ್ ಗೆ ಇಲ್ಲ. ಅವರ ಜಾತ್ಯತೀತತೆಯ ಮಾತು ಕೇವಲ ನಾಟಕ ಎಂದು ಈ ಮೂಲಕ ಸಾಬೀತಾಗಿದ ಎಂದು ಸಿಟಿ ರವಿ ಕಿಡಿಕಾರಿದ್ದಾರೆ.
ಇನ್ನು ಎಪಿಎಂಸಿ ಕಾಯ್ದೆ ಯುಪಿಎ ಸರ್ಕಾರ ಇದ್ದಾಗಲೇ 16 ರಾಜ್ಯಗಳಲ್ಲಿ ಅನುಷ್ಠಾನಕ್ಕೆ ಬಂದಿತ್ತು. ಕೇವಲ ವಿರೋಧಿಸಬೇಕೆಂದೇ ವಿರೋಧಿಸುವುದು ಸರಿಯಲ್ಲ. ಹೆಚ್ಚು ಮಾರುಕಟ್ಟೆ ಸ್ಥಾಪನೆ ಆದರೆ ರೈತನಿಗೆ ಲಾಭ ಆಗುತ್ತೋ, ನಷ್ಟ ಆಗಿತ್ತೋ..? ಎಂದು ಪ್ರಶ್ನಿಸಿದ ಅವರು, ಎಪಿಎಂಸಿಗಳು ದಲ್ಲಾಳಿ ಕೇಂದ್ರಿತ ಮಾರುಕಟ್ಟೆಗಳಾಗಿ ಪರಿವರ್ತನೆ ಆಗಿರುವುದು ಸುಳ್ಳಾ..?. ದಲ್ಲಾಳಿಗಳಿಗೆ ಅನುಕೂಲ ಮಾಡಿಕೊಡಲು ಸಂಚು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರತಿಭಟನೆ ವಿರುದ್ದ ಸಿ.ಟಿ ರವಿ ವ್ಯಂಗ್ಯವಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


