ಸೊಸೆಯನ್ನು ಬೆಂಬಲಿಸುವಂತೆ ಡಿ. ಕೆ. ರವಿ ತಾಯಿ ಮನವಿ
ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಐಎಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಕುಸುಮಾ ಪರ ರವಿ ತಾಯಿ ಗೌರಮ್ಮ ಮತಯಾಚಿಸಿದ್ದಾರೆ.

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಐಎಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಕುಸುಮಾ ಪರ ರವಿ ತಾಯಿ ಗೌರಮ್ಮ ಮತಯಾಚಿಸಿದ್ದಾರೆ.
ಕುಸುಮಾ ಕಾಂಗ್ರೆಸ್‌ನಿಂದ ಅಭ್ಯರ್ಥಿ ಎಂದು ತಿಳಿದ ತಕ್ಷಣ ಕುಸುಮಾ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿದ್ದ ರವಿ ತಾಯಿ, ಸೊಸೆ ತಮ್ಮನ್ನು ಭೇಟಿ ಮಾಡದೇ ನಿರ್ಲಕ್ಷ್ಯ ಮಾಡಿದ್ದು, ಅವಳಿಗೆ ತಮ್ಮ ಮಗನ ಹೆಸರು ಹೇಳಲು ಅರ್ಹತೆಯಿಲ್ಲ. ಈ ಚುನಾವಣೆಯಲ್ಲಿ ತಮ್ಮ ಮಗನ ಹೆಸರು ಬಳಕೆ ಮಾಡಿದರೆ ತಾವು ಸುಮ್ಮನಿರುವುದಿಲ್ಲ ಎಂದು ಹೇಳಿದ್ದರು.
ಬಿಜೆಪಿ ಅದನ್ನೇ ಅಸ್ತ್ರವಾಗಿ ಬಳಸಿ ಕುಸುಮಾ ಯಾವುದೇ ಕಾರಣಕ್ಕೂ ಡಿ.ಕೆ. ರವಿ ಹೆಸರು ಬಳಸಿಕೊಳ್ಳಬಾರದು ಎಂದು ಆಗ್ರಹಿಸಿತ್ತು. ಇದೀಗ ಬದಲಾದ ಸನ್ನಿವೇಶದಲ್ಲಿ ಸೊಸೆ ಪರ ಡಿ.ಕೆ.ರವಿ ತಾಯಿ ಮತಯಾಚಿಸಿ ಅಚ್ಚರಿಪಡಿಸಿದ್ದಾರೆ.
ಸಂಸದೆ ಶೋಭಾ ಕರಂದ್ಲಾಜೆ ಈ ಕುರಿತು ಟ್ವೀಟ್ ಮಾಡಿದ್ದಕ್ಕೆ ಕಾಂಗ್ರೆಸ್ ಮಹಿಳಾ ಘಟಕ ಶೋಭಾ ಕರಂದ್ಲಾಜೆ ವಿರುದ್ಧ ತಿರುಗಿ ಬಿದ್ದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


